ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮಹಾನಗರ ಪಾಲಿಕೆಯಲ್ಲಿ ನಮಗೆ ಮೇಯರ್ ಸ್ಥಾನ ಬೇಕು: ಸಿದ್ದರಾಮಯ್ಯ

|
Google Oneindia Kannada News

Recommended Video

ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ಬೇಡಿಕೆ ಇತ್ತ ಸಿದ್ದರಾಮಯ್ಯ | Oneindia Kannada

ಮೈಸೂರು, ಅಕ್ಟೋಬರ್ 24: ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರೇ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಹೀಗಾಗಿ ಮೇಯರ್​ ಸ್ಥಾನ ನಮಗೆ ನೀಡಬೇಕು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮೇಯರ್ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎಪಿಎಂಸಿ ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರ ನನಗೆ ಗೊತ್ತಿಲ್ಲ.

ಮೂರು ಮಹಾನಗರ ಪಾಲಿಕೆಗಳಿಗೆ ಇನ್ನೂ ಹೊಸ ಮೇಯರ್ ಸಿಕ್ಕಿಲ್ಲ! ಮೂರು ಮಹಾನಗರ ಪಾಲಿಕೆಗಳಿಗೆ ಇನ್ನೂ ಹೊಸ ಮೇಯರ್ ಸಿಕ್ಕಿಲ್ಲ!

ಜೆಡಿಎಸ್ - ಕಾಂಗ್ರೆಸ್ ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದ ಪಕ್ಷಗಳು. ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು ಮುರಿಸು ಉಂಟಾಗುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ಕಾಂಗ್ರೆಸ್ ನಡುವಿನ ಭಿನ್ನಮತ ಒಪ್ಪಿಕೊಂಡಿದ್ದಾರೆ.

Siddaramaiah says give us the mayor place

ಬಳ್ಳಾರಿ ನೆಲದಲ್ಲಿ ಶ್ರೀರಾಮುಲುಗೆ 5 ಪ್ರಶ್ನೆ ಕೇಳಿದ ಸಿದ್ದರಾಮಯ್ಯ!ಬಳ್ಳಾರಿ ನೆಲದಲ್ಲಿ ಶ್ರೀರಾಮುಲುಗೆ 5 ಪ್ರಶ್ನೆ ಕೇಳಿದ ಸಿದ್ದರಾಮಯ್ಯ!

ಇನ್ನು ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಹತ್ತಿರವಾಗುತ್ತಿದ್ದು, ಐದು ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಮಂಡ್ಯದ ಕಾಂಗ್ರೆಸ್ ನಾಯಕರು ಈಗಾಗಲೇ ಫಾರಿನ್ ಗೆ ಹೋಗಿ ಬಂದಿದ್ದಾರೆ. ಅವರು ಎಲ್ಲರೂ ಜೆಡಿಎಸ್ ಗೆ ಕೆಲಸ ಮಾಡುತ್ತಾರೆ.

ಉಪ ಚುನಾವಣೆ : ಸಿದ್ದರಾಮಯ್ಯ, ಶ್ರೀರಾಮುಲು ನಡುವೆ ಟ್ವಿಟರ್‌ ವಾರ್!ಉಪ ಚುನಾವಣೆ : ಸಿದ್ದರಾಮಯ್ಯ, ಶ್ರೀರಾಮುಲು ನಡುವೆ ಟ್ವಿಟರ್‌ ವಾರ್!

ನಮ್ಮ ಎದುರಾಳಿ ಬಿಜೆಪಿ ಆಗಿರುವುದರಿಂದ ಕೆಲಸ ಮಾಡಲೇಬೇಕು ಎಂದು ತಿಳಿಸಿದರು.

English summary
Farmer Chief Minister Siddaramaiah Said that In Mysore Mahanagara Palike election 2018 Congress has won a large number of members. So give us the mayor place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X