ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ "ಫ್ರೀ ಕಾಶ್ಮೀರ ಫಲಕ" ಪ್ರದರ್ಶನ ಸಮರ್ಥಿಸಿಕೊಂಡ ಸಿದ್ದು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 22: ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಯುವತಿ ನಳಿನಿ ಪರ ಮಾತನಾಡಿದ್ದಾರೆ. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘದ‌ ನಿರ್ಧಾರ ಅಸಂವಿಧಾನಿಕ ಎಂದು ಹೇಳಿದ್ದಾರೆ.

ಈ ಪ್ರಕರಣದ ಕುರಿತು ಮಾತನಾಡಿದ ಅವರು, "ಈ ರೀತಿ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ.‌ ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಫಲಕ ಪ್ರದರ್ಶಿಸಿದ್ದಾಳೆ. ಇದರ ವಿರುದ್ಧ ಮೈಸೂರು ವಕೀಲರ ಸಂಘ ವಕಾಲತ್ತು ವಹಿಸದೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ" ಎಂದು ವಿರೋಧಿಸಿದ್ದಾರೆ.

ಸಂಪುಟ ವಿಸ್ತರಣೆಯಾದರೆ ಸ್ಫೋಟ ಗ್ಯಾರಂಟಿ ಎಂದ ಸಿದ್ದುಸಂಪುಟ ವಿಸ್ತರಣೆಯಾದರೆ ಸ್ಫೋಟ ಗ್ಯಾರಂಟಿ ಎಂದ ಸಿದ್ದು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಶರಣಾದ ವಿಚಾರದ ಬಗ್ಗೆ ಮಾತನಾಡಿ, "ಆ ಬಗ್ಗೆ ನನಗೆ ಇನ್ನೂ ಸಂಪೂರ್ಣ ಮಾಹಿತಿ ಇಲ್ಲ. ಆತನ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಈ ವಿಚಾರದಲ್ಲಿ ಸಂಪೂರ್ಣವಾಗಿ ತನಿಖೆಯಾಗಲಿ" ಎಂದು ಹೇಳಿದರು.

Siddaramaiah Supports Nalini In Free Kashmir Placard Display Case In Mysuru

ಅಧ್ಯಕ್ಷ ಹುದ್ದೆಗೆ ನೇಮಕ: ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದರೇ ಮೂಲ ಕಾಂಗ್ರೆಸ್ಸಿಗರು? ಅಧ್ಯಕ್ಷ ಹುದ್ದೆಗೆ ನೇಮಕ: ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದರೇ ಮೂಲ ಕಾಂಗ್ರೆಸ್ಸಿಗರು?

ಇದೇ ಸಮಯದಲ್ಲಿ, ಬರದಿಂದ ತತ್ತರಿಸಿರುವ ರೈತರಿಂದ ಯಾವುದೇ ಕಾರಣಕ್ಕೂ ಸಾಲ ವಸೂಲಿ ಮಾಡಬಾರದು ಎಂದು ಆಗ್ರಹಿಸಿದರು. "ರೈತರು ತಾವಾಗಿಯೇ ಸಾಲ ವಾಪಸ್ ಕೊಟ್ಟರೆ ತೆಗೆದುಕೊಳ್ಳಿ. ಆದರೆ ಅವರಿಂದ ಬಲವಂತವಾಗಿ ವಸೂಲಿ ಮಾಡಬಾರದು. ಒಂದು ವೇಳೆ ವಸೂಲಿ ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ. ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಬರದ ಕಾರಣಕ್ಕಾಗಿಯೇ ರೈತರಿಂದ ಬಲವಂತ ಸಾಲ ವಸೂಲಿಬೇಡವೆಂದು ಹೇಳಿದ್ದೆ. ರಾಜ್ಯ ಸರ್ಕಾರದ ಈ ನಿಲುವನ್ನು ನಾನು ಖಂಡಿಸುತ್ತೇನೆ" ಎಂದರು.

English summary
Former CM and Opposition leader Siddaramaiah has supported Nalini in connection with the Free Kashmir placard display case in mysuru. He said "Mysuru Lawyers Association's decision not to advocate for Nalini is unconstitutional"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X