Siddaramaiah; ರಾಜಕೀಯ ನಿವೃತ್ತಿ ಮಾತನಾಡಿದ ಸಿದ್ದರಾಮಯ್ಯ!
ಮೈಸೂರು, ಮಾರ್ಚ್ 25; ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಮಾತನಾಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳು ಆಗಾಗ ಕೇಳಿ ಬರುತ್ತಿರುವಾಗಲೇ ಈ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ.
ಹುಟ್ಟೂರು ಸಿದ್ದರಾಮನ ಹುಂಡಿಗೆ ಸಿದ್ದರಾಮಯ್ಯ ಗುರುವಾರ ಭೇಟಿ ನೀಡಿದ್ದರು. ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮ ತಾಯಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಶ್ರೀ ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು.
ಸಿದ್ದರಾಮಯ್ಯ ಹುಟ್ಟೂರಿನಲ್ಲಿಯೇ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿದ್ದಾರೆ. 2018ರಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು.
ಈ ಬಾರಿ ಅವರು ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ? ಎಂಬ ಚರ್ಚೆಗಳು ನಡೆಯುತ್ತಿವೆ. ಬಾದಾಮಿಯಿಂದ ಮತ್ತೆ ಕಣಕ್ಕಿಳಿಯುವುದಿಲ್ಲ ಎಂಬ ಸುದ್ದಿಗಳು ಹಬ್ಬಿವೆ. ಇಂತಹ ಸಂದರ್ಭದಲ್ಲಿಯೇ ಚುನಾವಣಾ ರಾಜಕೀಯದಿಂದ ನಿವೃತ್ತಿಪಡೆಯುವ ಮಾತುಗಳನ್ನು ಸಿದ್ದರಾಮಯ್ಯ ಆಡಿದ್ದಾರೆ.

2023 ಕೊನೆಯ ಚುನಾವಣೆ
ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. "ಮುಂಬರುವ 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿಲ್ಲ. ಬಹಳಷ್ಟು ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ" ಎಂದು ಹೇಳಿದರು.

ಚುನಾವಣಾ ರಾಜಕೀಯದಿಂದ ದೂರ
"ಮುಂದಿನ ಚುನಾವಣೆಗೆ ಸ್ಪರ್ಧಿಸುವಂತೆ ವರುಣಾ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಮುಂದಿನ ಚುನಾವಣೆಯೇ ಕೊನೆಯ ಚುನಾವಣೆ ಆಗಿರುವುದರಿಂದ ಆಲೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಚುನಾವಣಾ ರಾಜಕೀಯದಿಂದ ದೂರವಾದರೂ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ" ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೇಸರ ಮಾಡಿಕೊಳ್ಳಲು ಆಗಲ್ಲ
"ನನಗೆ ಎಲ್ಲಿ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಜನರು ನನ್ನನ್ನು ಸೋಲಿಸಿದರು. ಹಾಗೆಂದು ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲು ಆಗುವುದಿಲ್ಲ. ಮುಂದಿನ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಎಲ್ಲಿಂದ ಸ್ಪರ್ಧಿಸಬೇಕು? ಎಂದು ಆಲೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದರು.

ವರುಣಾ ಕ್ಷೇತ್ರದಲ್ಲಿ ಪುತ್ರ ಶಾಸಕರು
ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದರು. ಮುಖ್ಯಮಂತ್ರಿಯಾಗಿದ್ದರೂ ಅಲ್ಲಿ ಸೋಲುವ ಸೂಚನೆ ಸಿಕ್ಕಿದ್ದರಿಂದ ಬಾದಾಮಿಯಲ್ಲಿಯೂ ಕಣಕ್ಕಿಳಿದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿ. ಟಿ. ದೇವೇಗೌಡ ವಿರುದ್ಧ ಸೋತ ಅವರು, ಬಾದಾಮಿಯಲ್ಲಿ ಬಿಜೆಪಿಯ ಬಿ. ಶ್ರೀರಾಮುಲು ವಿರುದ್ಧ ಜಯಗಳಿಸಿದರು. ಆದರೆ 2023ರ ಚುನಾವಣೆಗೆ ಅವರ ಕ್ಷೇತ್ರ ಯಾವುದು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ?
ಕರ್ನಾಟಕದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಪ್ರತಿಪಕ್ಷವಾಗಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗಿ ತಯಾರಿ ಆರಂಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಚುನಾವಣೆಗೆ ಹೋಗುವ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲಿದೆಯೇ? ಎಂದು ಕಾದು ನೋಡಬೇಕು.

ಸಿಎಂ ಅಭ್ಯರ್ಥಿ ಘೋಷಣೆ ಮಾಡಿ
ಕರ್ನಾಟಕ ಕಾಂಗ್ರೆಸ್‌ನಲ್ಲಿ ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂಬ ಬಣವಿದೆ. ಪಕ್ಷದಲ್ಲಿ ಒಳಜಗಳ ಗುಟ್ಟಾಗಿ ಉಳಿದಿಲ್ಲ ಎಂದು ಬಿಜೆಪಿ ಆರೋಪ ಮಾಡುತ್ತಿದೆ.
ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂದು ಘೋಷಣೆ ಮಾಡುವಂತೆ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕುತ್ತಿದೆ.
-
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications