ಶ್ರೀರಾಮನ ಮೊರೆ ಹೋದ ಸಿದ್ಧರಾಮಯ್ಯ: ನಾಮಪತ್ರ ಸಲ್ಲಿಕೆಗೆ ಮುನ್ನ ಹುಟ್ಟೂರಿನಲ್ಲಿ ದೇವಸ್ಥಾನಕ್ಕೆ ಭೇಟಿ
ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ ಇಂದು (ಏಪ್ರಿಲ್ 19) ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಹುಟ್ಟೂರಾದ ಸಿದ್ಧರಾಮನ ಹುಂಡಿಯಲ್ಲಿರುವ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಿಜೆಪಿ ಶ್ರೀರಾಮ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಹಲವು ಬಾರಿ ಟೀಕೆ ಮಾಡಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಶ್ರೀರಾಮ ಮತ್ತು ಸಿದ್ಧರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶಿರ್ವಾದ ಪಡೆದುಕೊಂಡಿದ್ದೇನೆ ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಎರಡೂ ದೇವಸ್ಥಾನಗಳಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿರುವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ನನ್ನ ಹುಟ್ಟೂರಾದ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದೆ. pic.twitter.com/ady4mBPSAR
— Siddaramaiah (@siddaramaiah) April 19, 2023
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದರೆ, ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಮತ್ತೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದು ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಅವರಿಗೆ ಎದುರಾಳಿಯಾಗಿ ಬಿಜೆಪಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಸಂಸದ ಪ್ರತಾಪ್ ಸಿಂಹ ವಿ. ಸೋಮಣ್ಣ ಅವರನ್ನು ಗೆಲ್ಲಿಸಲು ಪಣತೊಟ್ಟಿದ್ದು, ವರುಣಾದಲ್ಲಿ ರಾಜಕೀಯ ಅಖಾಡ ರಂಗೇರಿದೆ.
ವರುಣಾದಲ್ಲಿ ಡಾ. ಭಾರತಿ ಶಂಕರ್ ಕಣಕ್ಕೆ
ವರುಣಾ ಕ್ಷೇತ್ರದಲ್ಲಿ ಟಿ. ನರಸೀಪುರದ ಮಾಜಿ ಶಾಸಕ ಡಾ.ಎನ್.ಎಲ್. ಭಾರತೀಶಂಕರ್ ಜೆಡಿಎಸ್ ಪರವಾಗಿ ಕಣಕ್ಕಿಳಿಯಲಿದ್ದಾರೆ. ಸಾಮಾನ್ಯ ಕ್ಷೇತ್ರವಾಗಿರುವ ವರುಣಾದಲ್ಲಿಎಎಸ್.ಎಂ. ಅಭಿಷೇಕ್ ಅವರು ಕಣಕ್ಕಿಳಿಯುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಪರಿಶಿಷ್ಠ ಜಾತಿಗೆ ಸೇರಿದ ಡಾ.ಎನ್.ಎಲ್. ಭಾರತೀಶಂಕರ್ ಅವರನ್ನು ಕಣಕ್ಕಿಳಿಸುವ ಮೂಲಕ ಸಿದ್ಧರಾಮಯ್ಯ ಅವರನ್ನು ಸೋಲಿಸಲು ತಂತ್ರ ಹೂಡಿದೆ ಎನ್ನಲಾಗಿದೆ.
ಜೆಡಿಎಸ್-ಬಿಜೆಪಿ ಮೈತ್ರಿಯಾಗಿವೆ ಎಂದ ಸಿದ್ಧರಾಮಯ್ಯ
ನಂಜನಗೂಡಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ವರುಣಾದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು. ಯಾರು ಏನೇ ಮಾಡಿದರು ಈ ಬಾರಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಇದೇ ನನ್ನ ಕೊನೆಯ ಚುನಾವಣೆ ಎಂದಿರುವ ಅವರು ರಾಜಕೀಯ ನಿವೃತ್ತಿ ಪಡೆಯುವ ಮುನ್ಸೂಚನೆ ನೀಡಿದ್ದಾರೆ. ಇದೇ ವೇಳೆ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮೈಸೂರು ಜಿಲ್ಲೆಯ ಸ್ಥಳಿಯ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications