ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಹಾಜರಿರಲ್ಲ

Recommended Video

      Lok Sabha Elections 2019 : ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಸಿದ್ದರಾಮಯ್ಯ ಹಾಜರಿರಲ್ಲ

      ಮೈಸೂರು, ಮಾರ್ಚ್ 24: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ನಾನು ಹಾಜರಿರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

      ನಿಖಿಲ್ ಕುಮಾರಸ್ವಾಮಿ ಅವರ ತಾಯಿ, ಶಾಸಕ ಅನಿತಾ ಅವರು ನಮ್ಮ ಮನೆಗೆ ಬಂದು, ನಾಮಪತ್ರ ಸಲ್ಲಿಕೆ ವೇಳೆ ಬರಬೇಕು ಎಂದು ಕೇಳಿದರು. ಆದರೆ ಸೋಮವಾರದಂದು ಮೈಸೂರಿನಲ್ಲಿ ನನಗೆ ಕೆಲಸವಿದೆ. ಆ ನಂತರ ಚಿತ್ರದುರ್ಗಕ್ಕೆ ತೆರಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆ ಮೂಲಕ ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ತಾವು ಪಾಲ್ಗೊಳ್ಳುವುದಿಲ್ಲ ಎಂಬುದನ್ನು ತಿಳಿಸಿದ್ದಾರೆ.

      Siddaramaiah

      ನಾಮಪತ್ರ ಸಲ್ಲಿಕೆ ಮಾರ್ಚ್ ಇಪ್ಪತ್ತೈದನೇ ತಾರೀಕು ವಿವಿಧೆಡೆ ನಾಯಕರು ದಿನ ನಿಗದಿ ಮಾಡಿಕೊಂಡಿದ್ದಾರೆ. ಹಲವೆಡೆ ಏಕಕಾಲಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಕಾಂಗ್ರೆಸ್ ಇಪ್ಪತ್ತು, ಜೆಡಿಎಸ್ ಎಂಟು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+