ಮಗನ ಗೆಲ್ಲಿಸಿದ ವರುಣಾ ಮತದಾರರಿಗೆ ಸಿದ್ದರಾಮಯ್ಯರಿಂದ ಹೋಳಿಗೆ ಊಟ
ಮೈಸೂರು, ಜೂನ್ 12: ಗೆಲುವಿಗೆ ಕಾರಣರಾದ ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ ಬಳಿಕ ಮಗನನ್ನು ಗೆಲ್ಲಿಸಿರುವ ವರುಣಾ ಕ್ಷೇತ್ರದ ಜನರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.
ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರು ವರುಣಾ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಆ ನಂತರ ಎಲ್ಲರಿಗೂ ಹೋಳಿಗೆ ಊಟ ಹಾಕಲಾಯಿತು.
ಕಾರ್ಯಕ್ರಮದಲ್ಲಿ ಸಾವಿರಾರು ಜನ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಎಲ್ಲರಿಗೂ ಕಲ್ಯಾಣ ಮಂಟಪದಲ್ಲಿಯೇ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ವರುಣಾದಲ್ಲಿ ಚುನಾವಣೆಗೆ ನಿಂತಿದ್ದ ಯತೀಂದ್ರ ಸಿದ್ದರಾಮಯ್ಯ ಅವರು 58616 ಮತಗಳ ಬೃಹತ್ ಅಂತರದಿಂದ ಗೆಲುವು ಪಡೆದಿದ್ದಾರೆ. ಆದರೆ ಪಕ್ಕದ ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಸೋಲನ್ನನುಭವಿಸಿದ್ದರು.












Click it and Unblock the Notifications