ಕೃಷ್ಣ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ: ಯಡಿಯೂರಪ್ಪ

ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರಿರುವುದು ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರು, ಮಾರ್ಚ್ 23 : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಯಿಂದಾಗಿ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಬೆಂಗಳೂರಿನಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಸಹಕಾರಿಯಾಗಲಿದೆ.[ನಂಜನಗೂಡಿನಲ್ಲಿ ಲಿಂಗಾಯತ, ದಲಿತ ಮತಗಳ ಹಿಡಿತ ಯಾರಿಗೆ?]

SM Krishna is a great strength to BJP

ಎಸ್.ಎಂ.ಕೃಷ್ಣರವರು ಇಂದು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಕೃಷ್ಣ ಅವರು ಬೆಂಗಳೂರಿಗೆ ಬರುವುದು ಖಚಿತವಾಗುತ್ತಿದ್ದಂತೆ ನಾನು ಕೂಡ ಬೆಂಗಳೂರಿಗೆ ತೆರಳಿ ಅವರನ್ನು ನಮ್ಮ ಪಕ್ಷದ ಕಚೇರಿಗೆ ಬರಮಾಡಿಕೊಳ್ಳುತ್ತೇನೆ ಎಂದಿದ್ದಾರೆ.[ಉಪಚುನಾವಣೆಗೆ ಹೊಸ ವಿವಿಪಿಎಟಿ ಮತ ಯಂತ್ರಗಳು]

ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರಕ್ಕೂ ಕೃಷ್ಣಾ ಅವರನ್ನು ಕರೆತರಲು ಪ್ರಯತ್ನಿಸಲಾಗುವುದು, ಉಪಚುನಾವಣೆಯಲ್ಲಿ ಬಿಜೆಪಿ ಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂಬ ವಿಶ್ವಾಸವನ್ನು ಸಹ ಅವರು ವ್ಯಕ್ತಪಡಿಸಿದರು.[ನಂಜನಗೂಡು ಉಪಚುನಾವಣಾ: ಅಕ್ರಮ ಮದ್ಯ ವಶ]

ಎಲ್ಲಾ ಸಮಸ್ಯೆಗಳಿಗೂ ಕೇಂದ್ರದತ್ತ ಬೊಟ್ಟು ಮಾಡುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೆಲಸವಾಗಿದೆ. ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಪರಿಸ್ಥಿತಿ ನಿಭಾಯಿಸುವಲ್ಲೂ ರಾಜ್ಯ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲೂ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಳೆಯುತ್ತಿಲ್ಲ ಎಂದು ವಾಕ್ ಪ್ರಹಾರ ನಡೆಸಿದರು.[ಉಪಚುನಾವಣೆ: ಎರಡು ನಾಮಪತ್ರ ತಿರಸ್ಕೃತ]

ವಿಧಾನಮಂಡಲದ ಅಧಿವೇಶನದಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕೆಂಬ ಒತ್ತಾಯ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.ಈ ಕುರಿತು ಮಾಧ್ಯಮಗಳು ಒಳ್ಳೆಯ ರೀತಿಯಲ್ಲಿ ಚಿಂತಿಸಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕು ಪ್ರಮುಖ ಅಂಗಗಳಾಗಿವೆ. ಎಲ್ಲವೂ ಒಂದಕ್ಕೊಂದು ಪೂರಕವಾಗಿ ಸಾಗಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+