Breaking; ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ
ಮೈಸೂರು, ಸೆಪ್ಟೆಂಬರ್ 28: ಮೈಸೂರು ದಸರಾ 2021ರ ಉದ್ಘಾಟಕರ ಹೆಸರು ಅಂತಿಮವಾಗಿದೆ. ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ದಸರಾ ಉದ್ಘಾಟಿಸಲಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್. ಎಂ. ಕೃಷ್ಣ (89) ಹೆಸರನ್ನು ಅಂತಿಮಗೊಳಿಸಲಾಗಿದೆ. ಅಕ್ಟೋಬರ್ 7ರಂದು ಈ ಬಾರಿಯ ದಸರಾಕ್ಕೆ ಚಾಲನೆ ಸಿಗಲಿದೆ. ಈಗಾಗಲೇ ಮೈಸೂರಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಅಕ್ಟೋಬರ್ 7ರಿಂದ ಆರಂಭವಾಗಲಿರುವ #ನಾಡಹಬ್ಬದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ @BSBommai ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು
— CM of Karnataka (@CMofKarnataka) September 28, 2021
ಅಕ್ಟೋಬರ್ 7ರಿಂದ 15ರ ತನಕ ಈ ಬಾರಿಯ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಸರಳವಾಗಿ ದಸರಾ ನಡೆಯಲಿದ್ದು, ಅಕ್ಟೋಬರ್ 15ರಂದು ಜಂಬೂ ಸವಾರಿ ಸಹ ಅರಮನೆ ಆವರಣದಲ್ಲಿ ಮಾತ್ರ ನಡೆಯಲಿದೆ.
ಅಕ್ಟೋಬರ್ 7ರಂದು ಬೆಳಗ್ಗೆ 8.15ರಿಂದ 8.45ರ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ 2021ನೇ ಸಾಲಿನ ದಸರಾವನ್ನು ಉದ್ಘಾಟನೆ ಮಾಡಲಾಗುತ್ತದೆ. ಅರಮನೆ ಆವರಣದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಯುವ ದಸರಾ, ದಸರಾ ಆಹಾರ ಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳು ರದ್ದಾಗಿವೆ.
ಅಕ್ಟೋಬರ್ 15ರ ಸಂಜೆ 4.36 ರಿಂದ 4.44ರ ತನಕ ನಂದಿ ಪೂಜೆ ನಡೆಯಲಿದೆ. ಬಳಿಕ ಸಂಜೆ 5 ರಿಂದ 5.36ರ ತನಕ ಜಂಬೂ ಸವಾರಿ ನಡೆಯಲಿದೆ. ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವ 8 ಆನೆಗಳು ಈಗಾಗಲೇ ಮೈಸೂರಿಗೆ ಆಗಮಿಸಿದ್ದು, ಅರಮನೆಯ ಆವರಣದಲ್ಲಿ ತಾಲೀಮು ನಡೆಸುತ್ತಿವೆ.
ಬಿಗಿ ಪೊಲೀಸ್ ಭದ್ರತೆ; ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನಲೆಯಲ್ಲಿ ಮೈಸೂರು ನಗರದಾದ್ಯಂತ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಮಾತನಾಡಿದ ಪೊಲೀಸ್ ಆಯುಕ್ತರು, "ಮೈಸೂರು ದಸರಾ ಸಮೀಪಿಸುತ್ತಿದ್ದು, ಸಾರ್ವಜನಿಕರು ಅನಾಮಧೇಯ ವ್ಯಕ್ತಿಗಳು, ವಸ್ತುಗಳು ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು" ಎಂದು ಮನವಿ ಮಾಡಿದ್ದಾರೆ.
ದಸರಾ ಆನೆಗಳು; ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ಈ ಬಾರಿಯೂ ಸಹ ಚಿನ್ನದ ಅಂಬಾರಿಯನ್ನು 56 ವರ್ಷದ ಅಭಿಮನ್ಯು ಆನೆ ಹೊರಲಿದೆ. ಉಳಿದಂತೆ ವಿಕ್ರಮ, ಅಶ್ವತ್ಥಾಮ, ಲಕ್ಷ್ಮೀ, ಚೈತ್ರಾ, ಕಾವೇರಿ, ಧನಂಜಯ, ಗೋಪಾಲಸ್ವಾಮಿ ಆನೆಗಳು ದಸರಾದಲ್ಲಿ ಪಾಲ್ಗೊಳ್ಳುತ್ತಿವೆ.
ಎಸ್. ಎಂ. ಕೃಷ್ಣ ಪರಿಚಯ; 1932ರಲ್ಲಿ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಎಸ್. ಎಂ. ಕೃಷ್ಣ ಜನಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದರು. ಬೆಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು.
1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಗೊಂಡರು. 1971ರಲ್ಲಿ ಮತ್ತೊಮ್ಮೆ ಸಂಸದರಾದರು.
ಕಾಂಗ್ರೆಸ್ ಪಕ್ಷದಲ್ಲಿದ್ದ ಎಸ್. ಎಂ. ಕೃಷ್ಣ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡರು. ಸಚಿವರಾಗಿ, 1989 ರಿಂದ 1992ರ ತನಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಕರ್ನಾಟಕದ ಉಪಮುಖ್ಯಮಂತ್ರಿಯಾಗಿಯೂ ಕೆಲಸ ನಿರ್ವಹಣೆ ಮಾಡಿದರು.
1996ರಲ್ಲಿ ಕರ್ನಾಟಕದ 16ನೇ ಮುಖ್ಯಮಂತ್ರಿಯಾದರು. 2004-2008ರ ತನಕ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾರಿ ಕಾರ್ಯ ನಿರ್ವಹಣೆ ಮಾಡಿದರು.
ಬಳಿಕ ಕಾಂಗ್ರೆಸ್ ಪಕ್ಷ ತೊರೆದ ಎಸ್. ಎಂ. ಕೃಷ್ಣ ಬಿಜೆಪಿ ಸೇರಿದರು. ವಯೋಸಹಜ ಕಾರಣದಿಂದಾಗಿ ಈಗ ಸಕ್ರಿಯ ರಾಜಕಾರಣದಿಂದ ಕೃಷ್ಣ ದೂರ ಉಳಿದಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications