ದೆಹಲಿ ಚುನಾವಣೆ ಬಗ್ಗೆ ಪೋಸ್ಟ್: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ
ಮೈಸೂರು, ಫೆಬ್ರವರಿ 11: ಶನಿವಾರ ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಆಡಳಿತ ಪಕ್ಷವಾಗಿದ್ದ ಎಎಪಿ ಅಧಿಕಾರ ಕಳೆದುಕೊಂಡಿದೆ. 70 ಸದಸ್ಯ ಬದಲ ವಿಧಾನಸಭೆಯಲ್ಲಿ ಬಿಜೆಪಿ 48 ಸೀಟುಗಳಲ್ಲಿ ಗೆಲುವು ಸಾಧಿಸಿದ್ದು, ಸರ್ಕಾರ ರಚನೆ ಮಾಡುವ ತಯಾರಿ ಆರಂಭಿಸಿದೆ. ಈ ಚುನಾವಣೆ ಫಲಿತಾಂಶ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಕಾರಣವಾಗಿದೆ.
ಮೈಸೂರಿನ ವ್ಯಕ್ತಿಯೊಬ್ಬರು ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶದ ಕುರಿತು ವ್ಯಂಗ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಇದು ವೈರಲ್ ಆಗಿದ್ದು, ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟವಾಗಿದೆ. ಪೊಲೀಸರು ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ದೆಹಲಿಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರ ಪಡೆದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಿದ್ದರು. ಅಲ್ಲದೇ ಪೋಸ್ಟ್‌ನಲ್ಲಿ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು.
ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸ್ ಠಾಣೆ ಮುಂದೆ ಜನರು ಜವಾವಣೆಗೊಂಡರು. ಪೋಸ್ಟ್ ಹಾಕಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಠಾಣೆ ಮೇಲೆ ಕಲ್ಲು ತೂರಾಟವನ್ನು ನಡೆಸಿದರು.
ರೊಚ್ಚಿಗೆದ್ದ ಯುವಕರು: ಉದಯಗಿರಿ ಪೊಲೀಸ್ ಠಾಣೆ ಮುಂದೆ ಜನ ಜವಾವಣೆಗೊಳ್ಳುತ್ತಿದ್ದಂತೆಯೇ ಅಲ್ಲಿದ್ದ ಕೆಲವು ರಾಜಕೀಯ ಮುಖಂಡರು, ಧಾರ್ಮಿಕ ಗುರುಗಳು ಶಾಂತಿ ಕಾಪಾಡುವಂತೆ ಯುವಕರಲ್ಲಿ ಮನವಿ ಮಾಡಿದರು. ಆದರೆ ರೊಚ್ಚಿಗೆದ್ದ ಯುವಕರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟವನ್ನು ನಡೆಸಿದರು.
ಪರಿಸ್ಥಿತಿಯನ್ನು ತಿಳಿಗೊಳಿಸಲು ಮೊದಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಆದರೆ ಪರಿಸ್ಥಿತಿ ಬಿಗಡಾಯಿಸಿದ ಕಾರಣ ಅಶ್ರುವಾಯು ಸಿಡಿಸಿ ಜನರನ್ನು ಚೆದುರಿಸಿದರು. ತಕ್ಷಣ ನಗರದ ಬೇರೆ ಠಾಣೆಗಳಿಂದ ಉದಯಗಿರಿ ಠಾಣೆಗೆ ಹೆಚ್ಚಿನ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಯಿತು.
ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸ್ ಠಾಣೆ ಬಳಿ ಇದ್ದ ಯುಕವರಿಗೆ ಕಿವಿಮಾತು ಹೇಳಿ ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನ ನಡೆಸಿದರು. ಡಿಸಿಪಿ ಮುತ್ತುರಾಜ್ ಜೊತೆಗೆ ಇತರ ಸಿಬ್ಬಂದಿಗಳು ಶಾಂತಿ ಕಾಪಾಡುವಂತೆ ವಿಡಿಯೋ ಮಾಡಿ ಯುವಕರಲ್ಲಿ ಮನವಿ ಮಾಡಿದರು.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸ್ವಯಂ ಪ್ರೇರಿತ ಪ್ರಕರಣವನ್ನು ಸಹ ದಾಖಲು ಮಾಡಿಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಯ ಸುತ್ತ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ದೆಹಲಿ ಚುನಾವಣೆ 2025ರಲ್ಲಿ ಬಿಜೆಪಿ 48, ಎಎಪಿ 22 ಸ್ಥಾನಗಳಲ್ಲಿ ಜಯಗಳಿಸಿವೆ. ಚುನಾವಣೆಯಲ್ಲಿ ಸೋತ ಎಎಪಿ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. 2015, 2020 ಮತ್ತು 2025ರ ಚುನಾವಣೆಯಲ್ಲಿ ರಾಜ್ಯದಲ್ಲಿ ಒಂದು ಸೀಟು ಗೆಲ್ಲಲು ಸಹ ಕಾಂಗ್ರೆಸ್ ವಿಫಲವಾಗಿದ್ದು, ಮುಖಭಂಗ ಅನುಭವಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications