ಮೈಸೂರು ಲೋಕಸಭಾ ಚುನಾವಣೆ ಬಗ್ಗೆ ಜಿ.ಟಿ.ದೇವೇಗೌಡ ಶಾಕಿಂಗ್ ಹೇಳಿಕೆ
Recommended Video
ಮೈಸೂರು, ಮೇ 1 : ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕ್ಷೇತ್ರದ ವಿಜಯ್ ಶಂಕರ್ ಸೋಲುತ್ತಾರೇನೋ ಎಂಬ ಗುಮಾನಿ ಮೂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಆದರೆ ಮೈತ್ರಿಯಲ್ಲಿ ತಪ್ಪಾಗಿದೆ. ಜೆಡಿಎಸ್- ಕಾಂಗ್ರೆಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಜೆಡಿಎಸ್‌ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ ಉದ್ಬೂರು ಗ್ರಾಮ ಪಂಚಾಯಿತಿ ಸೇರಿದಂತೆ ಕೆಲವು ಕಡೆ ಹೀಗಾಗಿದೆ ಎಂದಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಕೆಲಸ ಮಾಡಿಲ್ಲ ಎಂಬ ಆರೋಪಗಳಿದ್ದವು. ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಬಹಿರಂಗವಾಗಿಯೇ ಒಪ್ಪಿಕೊಂಡ ಸಚಿವರು, ಮೈತ್ರಿ ಸರಿಯಾಗಿ ಕೆಲಸ ಮಾಡಿಲ್ಲ. ಒಂದು ವೇಳೆ ಜೆಡಿಎಸ್- ಕಾಂಗ್ರೆಸ್ ಒಟ್ಟಾಗಿದ್ದರೆ ಬಿಜೆಪಿಗೆ 3 ಸ್ಥಾನ ಗೆಲ್ಲುವುದಕ್ಕೂ ಜಾಗ ಇರುತ್ತಿರಲಿಲ್ಲ. ನಾವು ತಡವಾಗಿ ಮೈತ್ರಿ ಮಾಡಿಕೊಂಡೆವು. ಪರಿಣಾಮ ಕಾರ್ಯಕರ್ತರು ಒಟ್ಟಾಗಲು ಸಾಧ್ಯ ಆಗಲಿಲ್ಲ ಎಂದರು.

ಲೋಕಸಭಾ ಚುನಾವಣಾ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಅದು ಕೇಂದ್ರದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬುದರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಡೆಡ್‌ಲೈನ್ ಫಿಕ್ಸ್ ಆಗುತ್ತಲೇ ಇದೆ. ಕುಮಾರಸ್ವಾಮಿ ಸಿಎಂ, ಡಾ.ಜಿ.ಪರಮೇಶ್ವರ್ ಡಿಸಿಎಂ ಆದಾಗಿನಿಂದಲೂ ಹಲವಾರು ಬಾರಿ ಡೆಡ್‌ಲೈನ್ ಫಿಕ್ಸ್ ಆಗಿದೆ. ಆದರೆ ಸರ್ಕಾರ ಮಾತ್ರ ಸುಭದ್ರವಾಗಿದೆ ಎಂದಿದ್ದಾರೆ.












Click it and Unblock the Notifications