Breaking; ಮಾದೇಶ್ವರ ದೇವಾಲಯಕ್ಕೆ ಸೋನಿಯಾ ಗಾಂಧಿ ಭೇಟಿ
ಮೈಸೂರು, ಅಕ್ಟೋಬರ್ 05; ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾದೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಗುರುವಾರ ಭಾರತ್ ಜೋಡೋ ಯಾತ್ರೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಾಸ್ತವ್ಯ ಹೂಡಿದ್ದಾರೆ. ಬುಧವಾರ ಭೀಮನಕೊಲ್ಲಿಯ ಕಬಿನಿ ಹಿನ್ನೀರಿನಲ್ಲಿರುವ ಮಾದೇಶ್ವರ ದೇವಾಲಯಕ್ಕೆ ಸೋನಿಯಾ ಗಾಂಧಿ ಮಾತ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಬಿನಿ ಹಿನ್ನೀರಿನಲ್ಲಿರುವ ಮಾದೇಶ್ವರ ದೇವಾಲಯದ ಐತಿಹಾಸಿಕ ದೇವಾಲಯವಾಗಿದೆ. ಸೋನಿಯಾ ಗಾಂಧಿ ದೇವಾಲಯಕ್ಕೆ ಭೇಟಿ ನೀಡಿರುವ ಚಿತ್ರವನ್ನು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ಗುರುವಾರ ಮಂಡ್ಯದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಸೋಮವಾರವೇ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಮಡಿಕೇರಿಯಲ್ಲಿ ಅವರು ವಾಸ್ತವ್ಯ ಹೂಡಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದ ಕಾರಣ ಕಬಿನಿ ಹಿನ್ನೀರಿನಲ್ಲಿರುವ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮಂಗಳವಾರ ಮತ್ತು ಬುಧವಾರ ದಸರಾ ಹಿನ್ನಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಬಿಡುವು ನೀಡಲಾಗಿದೆ. ಗುರುವಾರ ಮಂಡ್ಯದ ಪಾಂಡವಪುರದಿಂದ ಯಾತ್ರೆ ಮತ್ತೆ ಆರಂಭವಾಗಲಿದೆ.

ಸೆಪ್ಟೆಂಬರ್ 30ರಂದು ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಆಗಮಿಸಿದೆ. 21 ದಿನಗಳ ಕಾಲ ಕರ್ನಾಟಕದಲ್ಲಿ ಯಾತ್ರೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜ್ಯದಲ್ಲಿ ಯಾತ್ರೆ ಯಶಸ್ವಿಗೊಳಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.
ಸೋನಿಯಾ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ಸಹ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಕ್ಟೋಬರ್ 7ರಿಂದ ಪ್ರಿಯಾಂಕಾ ಗಾಂಧಿ ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.












Click it and Unblock the Notifications