ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್-19 ನೆಗೆಟಿವ್ ವರದಿ ತರಲು ಜಿಲ್ಲಾಧಿಕಾರಿ ಸಲಹೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 8: ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್-19 ನೆಗೆಟಿವ್ ವರದಿ (ಕಳೆದ 72 ಗಂಟೆಯೊಳಗಿನ) ಹೊಂದಿರುವುದು ಸೂಕ್ತವಾಗಿದ್ದು, ಆದುದರಿಂದ ಈ ಸಲಹೆಯನ್ನು ಪಾಲಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

ಬೆಂಗಳೂರು ನಗರ ಮತ್ತು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಮೈಸೂರು ಜಿಲ್ಲೆಯಿಂದ ಅನೇಕ ಉದ್ಯೋಗ-ವ್ಯಾಪಾರ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಗೆ ಹೋಗಿ ಬರುತ್ತಿದ್ದಾರೆ.

ಅಲ್ಲದೇ ಮೈಸೂರು ಜಿಲ್ಲೆಯು ಪ್ರವಾಸಿ ತಾಣವಾಗಿರುವುದರಿಂದ ಅನೇಕ ಪ್ರವಾಸಿಗರು ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಪ್ರಕರಣಗಳು ಹರಡುವುದು ಹೆಚ್ಚಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಉಲ್ಬಣಗೊಂಡ ಪರಿಣಾಮ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಡಳಿತ, ಏ.10ರಿಂದ 20ರವರಗೆ ಜಿಲ್ಲೆಯಲ್ಲಿ ಕೊರೊನಾ ವಿಶೇಷ ಮಾರ್ಗಸೂಚಿ ಹೊರಡಿಸಲು ತೀರ್ಮಾನಿಸಿದೆ.

ಈ ಸಂಬಂಧ ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಏ.10ರಿಂದ ಸಾಲು ಸಾಲು ರಜಾ ದಿನಗಳು, ಹಬ್ಬ ಹರಿದಿನಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ತಡೆಗಟ್ಟುವ ಸಲುವಾಗಿ ಈ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದರು.

Special Coronavirus Guidelines Issued in Mysuru District From April 10 To 20: DC Rohini Sindhuri

ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣಿಸಿಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿಲ್ಲ. ಆದರೆ ಜಿಲ್ಲೆಯ ಪ್ರವಾಸಿ ಕೇಂದ್ರಗಳಿಗೆ ಹೋಗಬೇಕಾದಲ್ಲಿ, ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

Special Coronavirus Guidelines Issued in Mysuru District From April 10 To 20: DC Rohini Sindhuri

ಅಲ್ಲದೇ ಮೈಸೂರು ಜಿಲ್ಲೆಯಲ್ಲಿ ಮುಂದಿನ 10 ಹತ್ತುಗಳ ಕಾಲ ಚಲನಚಿತ್ರ ವೀಕ್ಷಿಸಲು ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ. ಇನ್ನು ಕೊರೊನಾ ನಿಯಂತ್ರಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊರೊನಾ ಸೋಂಕಿತರ ತಪಾಸಣೆ ನಡೆಸಲು 300 ಮಂದಿ ಹೋಮ್ ಗಾರ್ಡ್ ನೇಮಕ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

English summary
The district Administration has decided to issue a special Coronavirus Guidelines in the Mysuru district from April 10 to 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X