ಮೈಸೂರು-ಮನಮಧುರೈ ನಡುವೆ ವಿಶೇಷ ರೈಲು-ದಿನಾಂಕ, ಸಮಯಗಳು ಹಾಗೂ ನಿಲುಗಡೆ ವಿವರ ತಿಳಿಯಿರಿ
ಮೈಸೂರು, ಮಾರ್ಚ್, 07: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಪ್ರಮುಖ ಮಾರ್ಗಗಳಲ್ಲಿ ಆಗಾಗ ವಿಶೇಷ ರೈಲುಗಳನ್ನು ಬಿಡುತ್ತಲೇ ಇರುತ್ತದೆ. ಇದೀಗ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಪ್ರಯಾಣಿಕರ ಬೇಡಿಕೆ ಮೇರೆಗೆ ಮೈಸೂರು-ತಮಿಳುನಾಡಿನ-ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಬಿಡಲು ನಿರ್ಧರಿಸಲಾಗಿದೆ. ಹಾಗಾದರೆ ಸಮಯ ಹಾಗೂ ದಿನಾಂಕಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ವಿಶೇಷ ರೈಲು (06237) ಮಾರ್ಚ್ 11ರಂದು ಮೈಸೂರು ನಿಲ್ದಾಣದಿಂದ ಸಂಜೆ 6:35ಕ್ಕೆ ಹೊರಟು ಮರುದಿನ ಬೆಳಗ್ಗೆ 9:10ಕ್ಕೆ ಮನಮಧುರೈ ನಿಲ್ದಾಣವನ್ನು ತಲುಪಲಿದೆ. ಈ ರೈಲು ಮತ್ತೆ ಮಾರ್ಚ್ 12ರಂದು ಮಧ್ಯಾಹ್ನ 12ಕ್ಕೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ರಾತ್ರಿ 1:55ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರ, ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕಲ್, ಕರೂರ್, ತಿರುಚ್ಚಿರಾಪಳ್ಳಿ, ದಿಂಡಿಗಲ್, ಮಧುರೈ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
ಈ ವಿಶೇಷ ರೈಲಿನಲ್ಲಿಎರಡನೇಯ ಹವಾನಿಯಂತ್ರಿತ ದರ್ಜೆ-2, ಮೂರನೇಯ ಹವಾನಿಯಂತ್ರಿತ ದರ್ಜೆ- 6, ಸ್ಲೀಪರ್ ಕ್ಲಾಸ್ ಬೋಗಿಗಳು-9, ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರು-2 ಸೇರಿದಂತೆ ಒಟ್ಟು 21 ಬೋಗಿಗಳನ್ನು ಒಳಗೊಂಡಿರುತ್ತವೆ ಎಂದು ತಿಳಿಸಿದೆ.












Click it and Unblock the Notifications