ಗಿರೀಶ್ ಕಾರ್ನಾಡರ ನಾಟಕಗಳ ಕುರಿತು ಮೈಸೂರಿನಲ್ಲಿ ಕಾರ್ಯಾಗಾರ
ಮೈಸೂರು, ಜನವರಿ 31 : ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವಾರ್ಷಿಕೋತ್ಸವ ಅಂಗವಾಗಿ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ಫೆ.2ರಂದು ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ 'ಗಿರೀಶ್ ಕಾರ್ನಾಡರ ನಾಟಕಗಳಲ್ಲಿ ಪುರಾಣ, ಚರಿತ್ರೆ ಮತ್ತು ರಾಜಕೀಯ' ಕುರಿತು ಕಾರ್ಯಾಗಾರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ನಿರ್ದೇಶಕ ವೈ.ಕೆ.ಮುದ್ದುಕೃಷ್ಣ ಉದ್ಘಾಟಿಸಲಿದ್ದು, ರಂಗಾಯಣ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ದಿಕ್ಸೂಚಿ ಭಾಷಣ ಮಾಡುವರು. ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಗುಂಡಪ್ಪಗೌಡ, ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವ ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮಿನಾರಾಯಣ, ಕಾಲೇಜು ನಿರ್ವಹಣಾ ಮಂಡಳಿಯ ಅಧ್ಯಕ್ಷ ಟಿ.ನಾಗರಾಜು ಭಾಗವಹಿಸಲಿದ್ದಾರೆ..
ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ತಲಾ ಒಂದು ವಿಚಾರಗೋಷ್ಠಿ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಗಿರೀಶ್ ಕಾರ್ನಾಡರ ನಾಟಕಗಳು: ಒಂದು ಚಿಂತನೆ' ಕುರಿತ ಪ್ರೊ.ಎಚ್.ಎಸ್.ಉಮೇಶ್ ಉಪನ್ಯಾಸ ನೀಡುವರು.

ಮಧ್ಯಾಹ್ನ 12.15ಕ್ಕೆ 'ದಿ ಸ್ಟ್ರಕ್ಚರ್ ಆಫ್ ಕಾನ್ಷಿರೆಸಿ ಇನ್ ತುಘಲಕ್' ಕುರಿತು ಪ್ರೊ.ಸಿ.ನಾಗಣ್ಣ ಮತ್ತು ಮಧ್ಯಾಹ್ನ 2ಕ್ಕೆ 'ಗಿರೀಶ ಕಾರ್ನಾಡ ಕೆ ನಾಟಕೊಂ ಮೆಂ ಮಿಥಕ' ಕುರಿತು ಪ್ರೊ.ಪ್ರತಿಭಾ ಮುದಲಿಯಾರ್ ಉಪನ್ಯಾಸ ನೀಡುವರು. ಮಧ್ಯಾಹ್ನ 3.15ಕ್ಕೆ ನಡೆಯುವ ಸಂಶೋಧನಾ ಪ್ರಬಂಧ ಮಂಡನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಎಚ್.ಪಿ.ಗೀತಾ ವಹಿಸಿಕೊಳ್ಳಲಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications