Srinivasa Prasad: ನಂಜನಗೂಡಿಗೆ ಸ್ವಾಭಿಮಾನಿ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಕೊಡುಗೆ ಅಪಾರ
ಮೈಸೂರು, ಏಪ್ರಿಲ್, 29: ಸ್ವಾಭಿಮಾನಿ ರಾಜಕಾರಣಿ ಅಂತಲೇ ಹೆಸರುವಾಸಿಯಾಗಿದ್ದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ರಾಜಕಾರಣದಲ್ಲಿ ತುಂಬಾ ಹೆಸರು ಮಾಡಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ನಂಜನಗೂಡಿಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಈಗಲೂ ಕೂಡ ಈ ಕೊಡುಗೆಗಳ ಬಗ್ಗೆ ಇಲ್ಲಿನ ಬಾಯಲ್ಲಿ ಕೇಳಿಬರುತ್ತಲೇ ಇವೆ.
ನಂಜನಗೂಡಿನ ಪ್ರಗತಿಗೆ ನೆರವು: ಮೈಸೂರು ಜಿಲ್ಲೆಯ ನಂಜನಗೂಡು ವಿ.ಶ್ರೀನಿವಾಸ ಪ್ರಸಾದ್ ಅವರ ನೆಚ್ಚಿನ ಕ್ಷೇತ್ರವಾಗಿತ್ತು. ಕಂದಾಯ ಸಚಿವರಾಗಿದ್ದ ವೇಳೆ ರಾಜ್ಯದಲ್ಲಿಯೇ ತಾಲೂಕು ಮಟ್ಟದ ಅತ್ಯಂತ ಸುಸಜ್ಜಿತ ಕಂದಾಯ ಭವನವನ್ನು ನಿರ್ಮಿಸಿದ್ದರು. ಅಷ್ಟೇ ಅಲ್ಲದೆ 8.5 ಕೋಟಿ ಅಂದಾಜು ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ, 10.5 ಕೋಟಿ ಅಂದಾಜು ವೆಚ್ಚದಲ್ಲಿ ಊಟಿಯ ಬಟಾನಿಕಲ್ ಗಾರ್ಡನ್ ಮಾದರಿಯ ಸಸ್ಯ ಕಾಶಿ ನಿರ್ಮಾಣಕ್ಕೆ ಚಾಲನೆ ಕೊಟ್ಟ ಹೆಗ್ಗಳಿಕೆ ಇವರದ್ದಾಗಿದೆ.

ಕಳೆದ ಒಂದು ವಾರದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ಮೃತದೇಹವನ್ನು ಸೋಮವಾರ ಬೆಳಗ್ಗೆ 8 ಗಂಟೆಗೆ ತರಲಾಗುವುದು. ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
1947ರಲ್ಲಿ ಮೈಸೂರಿನ ಅಶೋಕಪುರಂನಲ್ಲಿ ಜನಿಸಿದ ಶ್ರೀನಿವಾಸ ಪ್ರಸಾದ್ ಅವರು ಶಾರದ ವಿಲಾಸ ಶಾಲಾ -ಕಾಲೇಜಿನಲ್ಲಿ ತಮ್ಮ ಪ್ರೌಢ ಹಾಗೂ ಕಾಲೇಜು ಶಿಕ್ಷಣವನ್ನು ಪೂರೈಸಿದ್ದರು. ನಂತರ ಬಿಎಸ್ಸಿ ವ್ಯಾಸಂಗ ಮಾಡಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ ಸಂಘಟನೆ ಹಾಗೂ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ರಾಜಕೀಯದ ಹಾದಿ ಹೇಗಿತ್ತು?: ಐದು ದಶಕಗಳ ರಾಜಕೀಯ ಹಾದಿ ಸವೆಸಿರುವ ಅವರು ಹಲವಾರು ಸಂದರ್ಭದಲ್ಲಿ ಪಕ್ಷಾಂತರ ಮಾಡಿದರೂ ಪಕ್ಷ ನಿಷ್ಠೆ, ವಿಚಾರ ನಿಷ್ಠೆಯಲ್ಲಿ ಬದಲಾಗಿಲ್ಲ. 1977ರಿಂದ 1979ರವರೆಗೆ ಜನತಾ ಪಾರ್ಟಿ, 1979ರಿಂದ 1983ರವರೆಗೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಇಂದಿರಾ), 1996ರಿಂದ 1997ರವರೆಗೆ ಸ್ವತಂತ್ರ, 1998ರಿಂದ 1999ರವರೆಗೆ ಸಮತಾ ಪಾರ್ಟಿ, 1999ರಿಂದ 2004ರವರೆಗೆ ಸಂಯುಕ್ತ ಜನತಾದಳದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2008, 2013ರಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. 2019ರಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು.
14 ಚುನಾವಣೆಯಲ್ಲಿ ಸ್ಪರ್ಧೆ: ವಿ.ಶ್ರೀನಿವಾಸ ಪ್ರಸಾದ್ ಅವರು 50 ವರ್ಷ ರಾಜಕೀಯ ಜೀವನವನ್ನು ಕಂಡಿದ್ದಾರೆ. ಇದರಲ್ಲಿ 6 ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಸಚಿವರಾಗಿ ಸೇವೆ: 2013ರಲ್ಲಿ ಶ್ರೀನಿವಾಸ ಪ್ರಸಾದ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿರು. ಅಲ್ಲದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಂದಾಯ ಸಚಿವರಾಗಿದ್ದಾಗ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಆಡಳಿತದಲ್ಲಿ ಹಲವಾರು ಬದಲಾವಣೆಗೂ ಕಾರಣರಾಗಿದ್ದರು.
ಬಿಜೆಪಿಗೆ ಸೇರ್ಪಡೆ: ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ಏಕಾಏಕಿ ಕೈಬಿಟ್ಟರೆಂದು ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ನಂಜನಗೂಡು ಉಪ ಚುನಾವಣೆ ಎದುರಿಸಿ ಪರಾಭವಗೊಂಡರು. ನಂತರ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯ ಗಳಿಸಿ ರಾಜಕೀಯ ನಿವೃತ್ತಿ ಪಡೆದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications