ಸಿಎಆರ್‌ಪಿಎಫ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಹಾಕಿ
ಮೈಸೂರು, ಫೆ.4 : ನವದೆಹಲಿಯ ಸಿಬ್ಬಂದಿ ನೇಮಕಾತಿ ಆಯೋಗ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಮತ್ತು ಅಸ್ಸಾಂ ರೈಫಲ್ಸ್ ಗಳಲ್ಲಿ ಖಾಲಿ ಇರುವ 1,772 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿ 10 ನೇ ತರಗತಿ ಓದಿರಬೇಕು ಮತ್ತು 18 ರಿಂದ 23 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡ/ ಓಬಿಸಿ (ಕೇಂದ್ರ) ಅಭ್ಯರ್ಥಿಗಳಿಗೆ ಕ್ರಮವಾಗಿ 5 ಮತ್ತು 3 ವರ್ಷಗಳ ರಿಯಾಯಿತಿ ಇರುತ್ತದೆ. [ಅಬಕಾರಿ ಇಲಾಖೆಯಲ್ಲಿ ಡ್ರೈವರ್ ಕೆಲಸ ಖಾಲಿ ಇದೆ]

ಅರ್ಜಿಯನ್ನು http://ssconline.nic.in ಅಥವಾ http://ssconline2.gov.in ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಭಾಗ -1ರಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 21 ಕೊನೆಯ ದಿನವಾಗಿದೆ. ಭಾಗ-2 ರಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 23 ಕೊನೆಯ ದಿನವಾಗಿರುತ್ತದೆ. [ಉಡುಪಿಯಲ್ಲಿ ಫೆ.5ರಿಂದ ಉದ್ಯೋಗ ಮೇಳ]
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ http://ssc.nic.in ವೆಬ್‍ಸೈಟ್ ನೋಡಬಹುದು. ಉಪ ಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು. ಇವರನ್ನು ಸಂಪರ್ಕಿಸಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು : 0821-2516844/9449686641












Click it and Unblock the Notifications