Karnataka SSLC Exam 2023 : ಮೈಸೂರು ಜಿಲ್ಲೆಯಲ್ಲಿ ಪರೀಕ್ಷೆ ಎದುರಿಸಲು ಸಜ್ಜಾದ 37,475 ಮಕ್ಕಳು, ಉಚಿತ KSRTC ಬಸ್ ವ್ಯವಸ್ಥೆ
ಮೈಸೂರು, ಮಾರ್ಚ್, 31: ಶುಕ್ರವಾರ (ಮಾರ್ಚ್ 31)ದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಶಾಂತಿ ಮತ್ತು ಸುಗಮವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 148 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 37475 ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದು, ಇದರಲ್ಲಿ 19,054 ಬಾಲಕರು, 18,421 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಲ್ಲದೆ ಪ್ರಶ್ನೆ ಪತ್ರಿಕೆ ಕೊಡಲು 61 ರೂಟ್ ಆಫೀಸರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಈಗಾಗಲೇ ಪ್ರಶ್ನೆಪತ್ರಿಕೆಗಳನ್ನು ಆಯಾ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದ್ದು, ಇದಕ್ಕಾಗಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಹಾಗೂ ಸಿಸಿಟಿವಿಯನ್ನೂ ಸಹ ಅಳವಡಿಸಲಾಗಿದೆ.
ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ಯಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತವೆಂದು ಘೋಷಣೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್‌ವಾಚ್ ಮತ್ತು ಇನ್ನಿತರೆ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿಗೂ ಪತ್ರ ಬರೆದು ಸಹಕಾರ ಕೋರಲಾಗಿದೆ.

ಜಾಗೃತಿ ದಳ ರಚನೆ
ಜಿಲ್ಲೆಯಲ್ಲಿ ಡಿಡಿಪಿಐ, ಉಪ ಯೋಜನಾ ಸಮನ್ವಯಾಧಿಕಾರಿ, ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರನ್ನು ಒಳಗೊಂಡಂತೆ ತಲಾ ಮೂರು ಸದಸ್ಯರಿರುವ 3 ಜಾಗೃತ ದಳಗಳನ್ನು ರಚಿಸಲಾಗಿದೆ. ಇದರ ಜೊತೆಗೆ ಸಿಟ್ಟಿಂಗ್ ಸ್ವ್ಕಾಡ್‌ಗಳು ಕೂಡ ಕರ್ತವ್ಯ ನಿರ್ವಹಿಸಲಿದ್ದಾರೆ. ನಗರ, ಗ್ರಾಮೀಣ ಹಾಗೂ ಬುಡಕಟ್ಟು ಭಾಗದ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಉಚಿತ ಬಸ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ವ್ಯವಸ್ಥೆ
ಇನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ಪತ್ರ ಬರೆದು ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಬಸ್ ಪ್ರಯಾಣ ಮಾಡಬಹುದು. ಇದರಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ಅನುಕೂಲ ಆಗಲಿದೆ. ಹಾಗೆಯೇ ಮಕ್ಕಳ ವಾಸ್ತವ್ಯಕ್ಕೆ ಬಿಸಿಎಂ ಹಾಗೂ ಸಮಾಜ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 31ರಂದು ಆರಂಭವಾಗುತ್ತದೆ. ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯಾದ್ಯಂತ 31-03-2023 ರಿಂದ 15-04-2023 ರವರೆಗೆ ನಡೆಯಲಿದೆ.
ಪರೀಕ್ಷೆಯ ದಿನಗಳ ವೇಳೆ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ನಿಷೇಧಾಜ್ಞೆಯನ್ನು ಜಾರಿಗೊಳಿಸದ ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಸೈಬರ್ ಸೆಂಟರ್‌ಗಳನ್ನು ತೆರೆಯುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿತ್ತು. ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಾರೆ. 2023ನೇ ಸಾಲಿನ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ನಡೆಸಬಹುದಾಗಿದೆ.
ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಸಿ ಮತ್ತು ಜಾ) ನಿರ್ದೇಶಕರು ಆದೇಶವೊಂದನ್ನು ಹೊರಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತ ಆದೇಶ ಇದಾಗಿದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications