ಮೈಸೂರು; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 33,012 ಮಕ್ಕಳು ಪಾಸು
ಮೈಸೂರು, ಮೇ 19: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 36,128 ವಿದ್ಯಾರ್ಥಿಗಳಲ್ಲಿ 33,012 ಮಂದಿ ಉತ್ತೀರ್ಣರಾಗಿದ್ದು, ಜಿಲ್ಲೆಗೆ 'ಎ' ಗ್ರೇಡ್ ಲಭಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.
ಕಳೆದ ಬಾರಿ ಪರೀಕ್ಷೆ ನಡೆಸದ ಪರಿಣಾಮ ಶೇ.100ರಷ್ಟು ಫಲಿತಾಂಶ ಬಂದಿತ್ತು. 2019-20ನೇ ಸಾಲಿನಲ್ಲಿ 74.45ರಷ್ಟು ಫಲಿತಾಂಶ ಬಂದಿತ್ತು. ಜಿಲ್ಲಾವಾರು ಲೆಕ್ಕಾಚಾರದಲ್ಲಿ ಈ ಹಿಂದೆ ಮೈಸೂರು ಹಿಂದೆ ಬಿದ್ದಿತ್ತು.
ಆದರೆ ಈ ಬಾರಿ ಸುಧಾರಣೆ ಕಂಡಿದೆ. ಈ ಬಾರಿ ಜಿಲ್ಲೆಯಲ್ಲಿ 18100 ಗಂಡು ಮಕ್ಕಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 16114 ಮಕ್ಕಳು ಪಾಸಾಗಿದ್ದಾರೆ. ಅದೇರೀತಿ 18028 ಹೆಣ್ಣುಮಕ್ಕಳು ಪರೀಕ್ಷೆ ಬರೆದಿದ್ದರು ಅದರಲ್ಲಿ 16898 ಮಕ್ಕಳು ತೇರ್ಗಡೆಯಾಗಿದ್ದಾರೆ.

ಒಟ್ಟು 276 ಸರಕಾರಿ ಶಾಲೆಯಲ್ಲಿ 16,125 ಮಕ್ಕಳು ಪರೀಕ್ಷೆ ಎದುರಿಸಿದ್ದರು. ಅದರಲ್ಲಿ 14,493 ಮಕ್ಕಳು ಪಾಸಾಗಿದ್ದಾರೆ. 134 ಅನುದಾನಿತ ಶಾಲೆಗಳಿದ್ದು, 7742 ಮಕ್ಕಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6997 ಮಕ್ಕಳು ಉತ್ತೀರ್ಣರಾಗಿದ್ದಾರೆ. 264 ಖಾಸಗಿ ಶಾಲೆಗಳಿದ್ದು, 12256 ಮಕ್ಕಳು ಪರೀಕ್ಷೆ ತೆಗೆದುಕೊಂಡಿದ್ದರು. ಅದರಲ್ಲಿ 11522 ಮಕ್ಕಳು ಪಾಸಾಗಿದ್ದಾರೆ ಎಂದರು.
ಆರು ಮಕ್ಕಳಿಗೆ 625ಕ್ಕೆ 625 ಅಂಕ; ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಯ 6 ಮಕ್ಕಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಅದರಲ್ಲಿ ಜಾಕಿ ಕ್ವಾಟರ್ಸ್ ಬಳಿ ಇರುವ ಸರಕಾರಿ ಆದರ್ಶ ವಿದ್ಯಾಲಯದ ಏಕ್ತಾ ಎಂ. ಜಿ. 625 ಅಂಕ ಪಡೆದು ಕೊಂಡಿದ್ದಾರೆ.
ಉಳಿದಂತೆ ಮೈಸೂರಿನ ಸದ್ವಿದ್ಯಾ ಇಂಗ್ಲಿಷ್ ಮೀಡಿಯಂ ಶಾಲೆಯ ಯಶಸ್ವಿ ಅರಸ್ ಎಂ., ಅದಿತಿ ಬಿ. ಎಸ್., ಮರಿಮಲ್ಲಪ್ಪ ಹೈಸ್ಕೂಲ್ನ ಚಾರುಕೀರ್ತಿ ಕೆ., ನಂಜನಗೂಡು ಕಾರ್ಮೆಲ್ ಇಂಗ್ಲಿಷ್ ಹೈಸ್ಕೂಲ್‌ನ ದೇವಿಕಾ ಜಿ, ಬನ್ನೂರಿನ ಶ್ರೀಆದಿಚುಂಚನಗಿರಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ ದಿಶಾ ಬಿ. ಎಂ. 625 ಅಂಕ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ 13 ಮಕ್ಕಳು 624 ಹಾಗೂ 23 ಮಕ್ಕಳು 623 ಅಂಕಗಳನ್ನು ಪಡೆದಿದ್ದಾರೆ.

ಈ ಬಾರಿ ಫಲಿತಾಂಶ ವೃದ್ಧಿಗೆ 50ಕ್ಕೂ ಹೆಚ್ಚು ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಲ್ಲದೆ 8ಕ್ಕೂ ಹೆಚ್ಚು ಕಿರುಪರೀಕ್ಷೆಗಳನ್ನು ಮಾಡಲಾಗಿತ್ತು. ಸಹಶಿಕ್ಷಕರು, ಮುಖ್ಯ ಶಿಕ್ಷಕರು, ಪೋಷಕರು ಹಾಗೂ ಮಕ್ಕಳ ಶ್ರಮದಿಂದ ಈ ಫಲಿತಾಂಶ ಸಿಕ್ಕಿದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದ್ದಾರೆ.
"ಸೆಲ್ಪ್ ಸ್ಟಡಿ ಮಾಡುತ್ತಿದ್ದೆ. ಯಾವುದೇ ಸಂದೇಹವಿದ್ದರೂ ಶಿಕ್ಷಕರ ಬಳಿ ಕೇಳಿ ಪರಿಹರಿಸಿಕೊಳ್ಳುತ್ತಿದ್ದೆ. ಮಧ್ಯಮ ವರ್ಗದ ಕುಟುಂಬ ನಮ್ಮದು. ಆದರೂ ಪೋಷಕರು ಶಿಕ್ಷಣಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡರು" ಎಂದು ಸರಕಾರಿ ಆದರ್ಶ ವಿದ್ಯಾಲಯ ವಿದ್ಯಾರ್ಥಿನಿ ಏಕ್ತಾ ಎಂ. ಜಿ. ತಿಳಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications