ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಏ.29 ರಿಂದ ಚಂದನ ವಾಹಿನಿಯಲ್ಲಿ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ'

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 22: ನಾನು ಈಗಾಗಲೇ ಪ್ರಕಟಿಸಿದಂತೆ ಕೊರೊನಾ ವೈರಸ್ ನಿಂದ ಲಾಕ್ ಡೌನ್ ಆಗಿದ್ದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಈ ತರಗತಿಗಳು ಏ.29 ರಿಂದ ಪ್ರತಿ ದಿನ ಮಧ್ಯಾಹ್ನ 3 ರಿಂದ 4.30 ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

""ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.''

SSLC Revision Classes Start Chandana Channel From April 29

18 ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

""ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ. ನನ್ನೆಲ್ಲ ವಿದ್ಯಾರ್ಥಿ ಮಿತ್ರರು ಈ ಮಹತ್ವದ ತರಗತಿಗಳನ್ನು ತಪ್ಪದೇ ವೀಕ್ಷಿಸಿ ಮುಂಬರುವ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತೀರೆಂಬ ವಿಶ್ವಾಸ ನನ್ನದು'' ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ.

English summary
The SSLC revival classes will start on the Chandana channel, said S Suresh Kumar, Minister of Primary and Secondary Education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X