SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಮೈಸೂರು, ಮಾರ್ಚ್ 27:ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಂಜನಗೂಡಿನ ಮಾಕನಪುರ ಮತ್ತು ಕಸವನಹಳ್ಳಿ ಸಮೀಪ ಈ ಘಟನೆ ನಡೆದಿದೆ. ನಂಜನಗೂಡು ತಾಲೂಕಿನ ಹಗಿನವಾಳು ಗ್ರಾಮದ ನಿವಾಸಿ ಮಣಿಕಂಠ (16) ಮೃತ ವಿದ್ಯಾರ್ಥಿ. ಪರೀಕ್ಷೆ ಬರೆಯಲು ದ್ವಿಚಕ್ರ ವಾಹನದಲ್ಲಿ ಮೂವರು ಸಹಪಾಠಿಗಳು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ.

ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮಣಿಕಂಠ ಸಾವಿಗೀಡಾದರೆ, ದರ್ಶನ್ (16) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ತುರ್ತು ನಿಗಾ ಘಟಕಕ್ಕೆ ದಾಖಲು ಮಾಡಲಾಗಿದೆ. ಮತ್ತೋರ್ವ ವಿದ್ಯಾರ್ಥಿ ಮಲ್ಲೇಶ್ ಅದೃಷ್ಟವಶಾತ್ ಅಪಘಾತದಿಂದ ಪಾರಾಗಿ ಪರೀಕ್ಷೆ ಬರೆದಿದ್ದಾನೆ.

SSLC Student died in Bike accident at Nanjangudu

ಹಗಿನವಾಳು ಗ್ರಾಮದಿಂದ ಪರೀಕ್ಷೆ ಬರೆಯಲು ಕಸುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಈ ಘಟನೆಯ ವಿಚಾರವಾಗಿ ನಂಜನಗೂಡಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+