ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲೂ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ; ಮುಲಾಜಿಲ್ಲದೇ ಜೈಲಿಗಟ್ಟಿ ಎಂದ ಸೋಮಶೇಖರ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 21: ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ನಿನ್ನೆ ದೌರ್ಜನ್ಯ ನಡೆದಿದ್ದು, ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಯೋಚಿಸುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ.

ಎನ್ ಆರ್ ಠಾಣಾ ವ್ಯಾಪ್ತಿಯ ಅಲೀಂ ನಗರದಲ್ಲಿ ನಿನ್ನೆ ಕೊರೊನಾ ಲಕ್ಷಣಗಳ ಬಗ್ಗೆ ಸರ್ವೇ ಮಾಡುವ ವೇಳೆ ಮೂವರು ಪುಂಡರು ಆಶಾ ಕಾರ್ಯಕರ್ತೆಗೆ ಧಮ್ಕಿ ಹಾಕಿದ್ದರು. ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಶ್ ಗೆ ಬೆದರಿಕೆ‌ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಗಲಾಟೆ ನಡೆಸಿದ್ದರು.

 ಮೈಸೂರಿನಲ್ಲೂ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ

ಮೈಸೂರಿನಲ್ಲೂ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ

ನಿನ್ನೆ ಅಲೀಂ ನಗರದಲ್ಲಿ ಸುಮಯಾ ಪಿರ್ದೋಶ್ ಎಂಬ ಆಶಾ ಕಾರ್ಯಕರ್ತೆಗೆ ಮೂವರು ಧಮ್ಕಿ ಹಾಕಿದ್ದರು. ಕೊರೊನಾ ಕುರಿತು ಸರ್ವೇ ಮಾಡಲು ಹೋದಾಗ ಅವರ ಮೇಲೆ ಜಗಳಕ್ಕೆ ಬಿದ್ದಿದ್ದರು. ಮೆಹಬೂಬ್, ಖಲೀಲಾ, ಜೀಸನ್ ಎಂಬುವರು ಗಲಾಟೆ ನಡೆಸಿ ಪರಾರಿಯಾಗಿದ್ದರು. ಈ ಬಗ್ಗೆ‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಡಚಿಯಲ್ಲಿ ಮತ್ತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆಕುಡಚಿಯಲ್ಲಿ ಮತ್ತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ

 ಮೂವರ ಮೇಲೆ ಎಫ್ ಐಆರ್

ಮೂವರ ಮೇಲೆ ಎಫ್ ಐಆರ್

ಧಮ್ಕಿ ಹಾಕಿದ ಆರೋಪಿಗಳ ವಿರುದ್ಧ ಆಶಾ ಕಾರ್ಯಕರ್ತೆ ಎನ್ ಆರ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ 1561 ಮಂದಿಯನ್ನು ಈಗಾಗಲೇ ಪರೀಕ್ಷೆ ಮಾಡಲಾಗಿದೆ. ಇನ್ನೂ ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದೂ ಹೇಳಿದರು.

 ಕಠಿಣ ಕ್ರಮದ ಆಲೋಚನೆ

ಕಠಿಣ ಕ್ರಮದ ಆಲೋಚನೆ

ರಾಜ್ಯದಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗೆಂದು ಹೋದಾಗ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶದ ಕಾನೂನಿನಂತೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಯೋಚಿಸುತಿದ್ದು ಶೀಘ್ರವೇ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಲಾಕ್ ಡೌನ್ ಪಾಲಿಸಿ ಎಂದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆಲಾಕ್ ಡೌನ್ ಪಾಲಿಸಿ ಎಂದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ

"ಮುಲಾಜಿಲ್ಲದೇ ಜೈಲಿಗಟ್ಟಲಾಗುವುದು"

ಹಲ್ಲೆ ನಡೆಸುವ ಎಲ್ಲ ದುಷ್ಕರ್ಮಿಗಳನ್ನೂ ಮುಲಾಜಿಲ್ಲದೆ ಜೈಲಿಗಟ್ಟಲಾಗುವುದು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟು ಮಾಡುವವರಿಂದ ನಷ್ಟದ ಮೊತ್ತವನ್ನೂ ವಸೂಲಿ ಮಾಡಲಾಗುವುದು. ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ. ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಇಂತಹ ಘಟನೆಯನ್ನು ನಾನು ಸಹಿಸುವುದಿಲ್ಲ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

English summary
There is an incident of harrasment on asha worker in mysuru yesterday, we will take strong action against this incident informed st somashekhar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X