ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿಗೆ ಮೋದಿ ಭೇಟಿ; ಸಿದ್ಧತೆ ಪರಿಶೀಲಿಸಿದ ಸಚಿವರು, ಸಂಸದರು

|
Google Oneindia Kannada News

ಮೈಸೂರು, ಜೂನ್ 18; ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 21ರಂದು ಮೈಸೂರಿನ ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಸಿದ್ಧತಾ ಕಾರ್ಯಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.

ಶನಿವಾರ ಸಚಿವರು, ಸಂಸದ ಪ್ರತಾಪ್ ಸಿಂಹ ಯೋಗ ಕಾರ್ಯಕ್ರಮ ನಡೆಯುವ ಅರಮನೆ ಆವರಣ, ಕೇಂದ್ರ ಆಯುಷ್ ಇಲಾಖೆಯ ವಸ್ತುಪ್ರದರ್ಶನ ನಡೆಯುವ ದಸರಾ ವಸ್ತು ಪ್ರದರ್ಶನ ಮೈದಾನ, ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸುವ ಮಹಾರಾಜ ಕಾಲೇಜು ಮೈದಾನ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ವೀಕ್ಷಿಸಿದರು.

ನನ್ನ ರಾಮದಾಸ್ ನಡುವೆ ಕ್ರೆಡಿಟ್ ವಾರ್ ಇಲ್ಲ: ಪ್ರತಾಪ ಸಿಂಹ ನನ್ನ ರಾಮದಾಸ್ ನಡುವೆ ಕ್ರೆಡಿಟ್ ವಾರ್ ಇಲ್ಲ: ಪ್ರತಾಪ ಸಿಂಹ

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವ ಎಸ್. ಟಿ. ಸೋಮಶೇಖರ್, "ಯಾವುದೇ ಲೋಪವಾಗದಂತೆ, ಎಸ್‌ಜಿಪಿ ಅವರ ನಿರ್ದೇಶನದ ಅನುಸಾರ ಸಿದ್ಧತೆ ಕಾರ್ಯಗಳು ಪೂರ್ಣಗೊಳ್ಳಬೇಕು" ಎಂದು ಸೂಚಿಸಿದರು.

ಮೈಸೂರಿಗೆ ಮೋದಿ; ನಗರದಲ್ಲಿನ ಭದ್ರತೆ ಹೇಗಿದೆ? ಮೈಸೂರಿಗೆ ಮೋದಿ; ನಗರದಲ್ಲಿನ ಭದ್ರತೆ ಹೇಗಿದೆ?

ST Somashekar Inspects International Yoga Day Event Preparations

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, "ಜೂನ್ 19ರಂದು ಅಂತಿಮ ಹಂತದ ಯೋಗ ತಾಲೀಮು ನಡೆಸಲಾಗುತ್ತದೆ. ಯೋಗಪಟುಗಳು ಬೆಳಗ್ಗೆ 5.30ಕ್ಕೆ ಅರಮನೆ ಆವರಣ ಪ್ರವೇಶಿಸಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು" ಎಂದು ಹೇಳಿದರು.

 ಯೋಗ ದಿನ: ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ ಯೋಗ ದಿನ: ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಅರಮನೆ

ಮಳೆ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಕಳೆದ 10-15 ವರ್ಷದ ಇತಿಹಾಸ ಗಮನಿಸಿದರೆ ಬೆಳಗ್ಗಿನ ವೇಳೆ ಮಳೆ ಬಂದ ನಿದರ್ಶನ ಇಲ್ಲ. ಎಸ್‌ಜಿಪಿ ನಿರ್ದೇಶನದ ಅನುಸಾರ ಎಲ್ಲಾ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ" ಎಂದರು.

"ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಮಂತ್ರಿಗಳು ಕೇಂದ್ರ ಪುರಸ್ಕೃತ ಯೋಜನೆಗಳ‌ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 20 ಜನ ಫಲಾನುಭವಿಗಳನ್ನು ಗುರುತಿಸಲಾಗಿದ್ದು ಪ್ರಧಾನಿಗಳು ಯಾರೊಂದಿಗೆ ಬೇಕಾದರೂ ಸಂವಾದ ನಡೆಸಬಹುದು" ಎಂದು ಸಚಿವರು ತಿಳಿಸಿದರು.

ST Somashekar Inspects International Yoga Day Event Preparations

ಪರಿಶೀಲನೆ ಬಳಿಕ ಅರಮನೆ ಆಡಳಿತ ಮಂಡಳಿಯಲ್ಲಿ ಯೋಗ ಕಾರ್ಯಕ್ರಮಗಳ ಸಂಬಂಧ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು. ಯೋಗ ಕಾರ್ಯಕ್ರಮದಲ್ಲಿ 15 ಸಾವಿರ ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ನಾಲ್ಕು ಗೇಟ್‌ಗಳ ಮೂಲಕ ಅರಮನೆ ಆವರಣ ಪ್ರವೇಶಿಸಬಹುದಾಗಿದೆ. ಕ್ಯೂ ಆರ್ ಕೋಡ್ ಹೊಂದಿರುವ ವಾಹನಗಳನ್ನು ಸ್ಕ್ಯಾನಿಂಗ್ ಮಾಡಿದ ನಂತರವಷ್ಟೇ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಗಣ್ಯರಿಗೆ ಪ್ರತ್ಯೇಕ ಪ್ರವೇಶ ಇರಲಿದೆ.

English summary
Mysuru-Kodagu MP Pratap Simha and district in-charge minister S. T. Somashekar inspected place and preparations of the international yoga day event 2022 at Mysuru palace. Prime minister of India Narendra Modi will participate in the event on June 21st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X