ಹೋಂ ಕ್ವಾರಂಟೈನ್ ನಲ್ಲಿ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ಜುಲೈ 28: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಅವಧಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Recommended Video
Corona ಮಹಿಳೆಯರಿಗಿಂತ ಪುರುಷರಲ್ಲಿ ಹೆಚ್ಚು | Oneindia Kannada
ಸೋಮಶೇಖರ್ ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ. ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಿಂದ ಮಾಹಿತಿ ನೀಡಿದ್ದಾರೆ.

ಸಚಿವ ಎಸ್.ಟಿ. ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಚಿವರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.












Click it and Unblock the Notifications