• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪತ್ರಿಕಾ ವಿತರಕರ ನೆರವಿಗೆ ಪ್ಯಾಕೇಜ್ ಘೋಷಿಸಲು ಸಿಎಂಗೆ ಉಸ್ತುವಾರಿ ಸಚಿವರ ಪತ್ರ

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 12: ಕೊರೊನಾ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್‌ ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರು ಸಂಕಷ್ಟದಲ್ಲಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಮನೆಮನೆಗೆ ತೆರಳಿ ಪತ್ರಿಕಾ ಬಿಲ್ ಗಳನ್ನು ವಸೂಲಿ ಮಾಡಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇವರೆಲ್ಲ ಆರ್ಥಿಕವಾಗಿ ತೀವ್ರ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಇವರ ಜೀವನ ನಿರ್ವಹಣೆಗೆ ಆರ್ಥಿಕ ಸಹಾಯ ನೀಡಬೇಕೆಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಸೋಮಶೇಖರ್, ಬೆಂಗಳೂರಿಗೆ ತೆರಳಿದ ಕೂಡಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಪತ್ರಿಕೆ ಬಿಲ್ ವಸೂಲಾಗದಿದ್ದರೂ ಪತ್ರಿಕೆಗಳಿಗೆ ಏಜೆಂಟರು ಹಣ ಸಂದಾಯ ಮಾಡಲೇಬೇಕಾದ ಅನಿವಾರ್ಯತೆ ಸಿಲುಕಿದ್ದಾರೆ. ಪತ್ರಿಕೆ ವಿತರಣೆಯೇ ಇವರ ಕಾಯಕವಾಗಿದ್ದು, ಇದೊಂದೇ ವೃತ್ತಿಯನ್ನು ಬಹುತೇಕರು ಅವಲಂಬಿಸಿದ್ದಾರೆ. ಹೀಗಾಗಿ ಇವರಿಗೆ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಇವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕಿದ್ದು, ಕೂಡಲೇ ಆರ್ಥಿಕ ಪ್ಯಾಕೇಜ್ ಘೋಷಿಸುವ ಮೂಲಕ ಇವರ ಕಾರ್ಯವನ್ನು ಮುಂದುವರಿಸಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ವಿಷಯವನ್ನು ಮುಖ್ಯಮಂತ್ರಿಗಳಿಗೆ ಪತ್ರದ ಮುಖೇನ ಮನವಿ ಮಾಡಿದ್ದೇನೆ. ಜೊತೆಗೆ ಖುದ್ದು ಭೇಟಿಯಾಗಿ ಪತ್ರಿಕಾ ವಿತರಕರ ಸಮಸ್ಯೆಗಳನ್ನು ಗಮನಕ್ಕೆ ತಂದು ಪರಿಹರಿಸುವ ಪ್ರಯತ್ನ ಮಾಡುತ್ತೇನೆ. ಸರ್ಕಾರ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರ ಸಂಕಷ್ಟಕ್ಕೆ ಸ್ಪಂದಿಸಲಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

English summary
Mysuru district incharge minister ST Somashekhar Written letter to Cm yediyurappa to announce special package to help News Paper distributors,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X