ದಸರಾಕ್ಕೆ ಮೈಸೂರು ಸಜ್ಜು, ಶನಿವಾರ ಉದ್ಘಾಟನೆ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಶನಿವಾರ ಬೆಳಗ್ಗೆ 10.44 ರಿಂದ 11.07ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಪ್ರಕಾಶ್ ಹುಕ್ಕೇರಿ, ಶಾಸಕ ಜಿ.ಟಿ.ದೇವೇಗೌಡ ಮುಂತಾದವರು ಈ ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶನಿವಾರ ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ರಂಗಕರ್ಮಿ ನಾಡೋಜ ಡಾ.ಏಣಗಿ ಬಾಳಪ್ಪ ಅವರು ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಇದೇ ವೇದಿಕೆಯಲ್ಲಿ ರಾಜ್ಯ ಸಂಗೀತ ವಿದ್ವಾನ ಪ್ರಶಸ್ತಿ ಪ್ರಧಾನ ಸಮಾರಂಭವೂ ನಡೆಯಲಿದೆ.
ದಸರಾ ಉತ್ಸವದ ಹಿನ್ನಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸಲಿದ್ದಾರೆ. 10 ದಿನಗಳ ದಸರಾ ಉತ್ಸವ ಆಚರಿಸಲು ನಗರ ಸಕಲ ರೀತಿಯಲ್ಲಿ ಸಜ್ಜಾಗಿ ನಿಂತಿದೆ.
ಗುರುವಾರ ರಾತ್ರಿಯ ವರೆಗೂ ಅರಮನೆ ಸುತ್ತಲಿನ ರಾಜಪಥ ಕಾಮಗಾರಿ ನಡೆಯುತ್ತಿತ್ತು. ಕೆಲವು ರಸ್ತೆಗಳ ಡಾಂಬರೀಕರಣ ಕಾಮಗಾರಿಯನ್ನು ಗುರುವಾರ ತಡರಾತ್ರಿ ಪೂರ್ಣಗೊಳಿಸಲಾಗಿದೆ. ಶುಕ್ರವಾರ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ದಸರಾ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ನಗರ ಸ್ಪತ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ಆರಂಭವಾದ ಆಂದೋಲನದಲ್ಲಿ ಪರಿಸರವಾದಿ ಸುರೇಶ್ ಹೆಬ್ಳಿಕರ್, ಮೇಯರ್ ರಾಜೇಶ್ವರಿ, ಶಾಸಕ ಜಿ.ಟಿ.ದೇವೇಗೌಡ ಪಾಲ್ಗೊಂಡಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications