ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ

ಮೈಸೂರಿನಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ತಂಬಾಕು ನಿಯಂತ್ರಣಕ್ಕೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಹೊರಡಿಸಿದ್ದಾರೆ. ಹಾಗಾದರೆ ಆ ನಿಯಮಗಳು ಯಾವುವು ಎಂದು ಇಲ್ಲಿ ತಿಳಿಯಿರಿ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ, 01: ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ 2022ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೂ ಸಂಗ್ರಹಿಸಲಾದ ದಂಡದ ವಿವರವನ್ನು ಕೂಡ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ನಿಯಮಿತವಾಗಿ ದಾಳಿ ನಡೆಸಿ, ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕು. ನಮ್ಮ ಆರೋಗ್ಯ ನೋಡಿಕೊಳ್ಳುವ ರೀತಿಯಲ್ಲಿಯೇ ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಚಿರತೆ ಹಾವಳಿ ತಡೆಗೆ ಟಾಸ್ಕ್ ಪೋರ್ಸ್‌ ರಚಿಸಿ ಆದೇಶ ಹೊರಡಿಸಿದ ಸರ್ಕಾರ, ತಂಡಗಳ ವಿವರ ಇಲ್ಲಿದೆಚಿರತೆ ಹಾವಳಿ ತಡೆಗೆ ಟಾಸ್ಕ್ ಪೋರ್ಸ್‌ ರಚಿಸಿ ಆದೇಶ ಹೊರಡಿಸಿದ ಸರ್ಕಾರ, ತಂಡಗಳ ವಿವರ ಇಲ್ಲಿದೆ

ಪೊಲೀಸ್, ಶಿಕ್ಷಣ, ಆರೋಗ್ಯ, ಮಹಾನಗರ ಪಾಲಿಕೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಸೇವನೆಯ ವಿರುದ್ಧ ನಿರಂತರ ಜಾಗೃತಿ ಮೂಡಿಸಬೇಕು. ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಪ್ರಚಾರ ಫಲಕ ಮತ್ತು ಜಾಹಿರಾತುಗಳ ಮೂಲಕ ಪ್ರದರ್ಶಿಸಬೇಕು. ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಂಬಾಕು ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

 ದಂಡ ವಿಧಿಸುವ ಕೆಲಸ ಮಾಡಬೇಕು

ದಂಡ ವಿಧಿಸುವ ಕೆಲಸ ಮಾಡಬೇಕು

ಜಿಲ್ಲಾದ್ಯಂತ ಜಿಲ್ಲಾ ತಂಬಾಕು ನಿಯಂತ್ರಣ ತಂಡದ ವತಿಯಿಂದ ಸಿಗರೇಟ್‌ ಮತ್ತು ತಂಬಾಕು ಉತ್ಪನ್ನಗಳ ಅಧಿನಿಯಮದಡಿ ದಾಳಿ ನಡೆಸಿ, ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧಿಸಿರುವ ಕುರಿತು, ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹಿರಾತು ನಿಷೇಧದ ಬಗ್ಗೆ ಅರಿವು ಮೂಡಿಸಿ ದಂಡ ವಿಧಿಸುವ ಕೆಲಸ ಮಾಡಬೇಕು. ಹಾಹೆಯೇ ಶಾಲಾ-ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮತ್ತು ಮಾರಾಟ ನಿಷೇಧದ ನಾಮಫಲಕವನ್ನು ಕಡ್ಡಾಯವಾಗಿ ಬರೆಸಬೇಕು. ಹಾಗೂ ವರ್ತಕರು ಅಥವಾ ಚಿಲ್ಲರೆ ವ್ಯಾಪಾರಿಗಳು ಶಾಲಾ -ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ಏನು ಮಾರಾಟ ಮಾಡಬಾರದು ಎಂದರು.

 ತಂಬಾಕು ಮಾರಾಟ ನಿಷೇಧಿಸಲಾದ ಸ್ಥಳಗಳು

ತಂಬಾಕು ಮಾರಾಟ ನಿಷೇಧಿಸಲಾದ ಸ್ಥಳಗಳು

ಸಭೆಯಲ್ಲಿ ಸೆಕ್ಷನ್ 4 ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಿದೆ. ಈ ಕಾಯ್ದೆ ಅಡಿಯಲ್ಲಿ 1,218 ಪ್ರಕರಣಗಳು ದಾಖಲಾಗಿದ್ದು, 1,34,820 ರೂಪಾಯಿಗಳನ್ನು ಸಂಗ್ರಹಿಸಲಾಗಿದೆ. ಸೆಕ್ಷನ್ 6 ಎ ನಲ್ಲಿ 482 ಪ್ರಕರಣಗಳು ದಾಖಲಾಗಿವೆ. ಹಾಗೂ 52,300 ರೂ. ಗಳನ್ನು ಸಂಗ್ರಹಿಸಲಾಗಿದೆ.

 ದಾಖಲಾದ ಪ್ರಕರಣಗಳ ಸಂಪೂರ್ಣ ವಿವರ

ದಾಖಲಾದ ಪ್ರಕರಣಗಳ ಸಂಪೂರ್ಣ ವಿವರ

ಸೆಕ್ಷನ್ 6 'ಬಿ' ಯ ಅಡಿಯಲ್ಲಿ 35 ಪ್ರಕರಣಗಳು ದಾಖಲಾಗಿದ್ದು, 4,100 ರೂ. ಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ 2022ರ ಏಪ್ರಿಲ್‌ನಿಂದ 2022 ರ ಡಿಸೆಂಬರ್‌ವರೆಗೆ 48 ರೈಡ್‌ಗಳು ನಡೆದಿದ್ದು, 1,735 ಪ್ರಕರಣಗಳು ದಾಖಲಾಗಿವೆ. ಒಟ್ಟು 1,91,220 ರೂಪಾಯಿಗಳು ಸಂಗ್ರಹವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪ್ರಸಾದ್ ಅವರು ತಿಳಿಸಿದರು.

 ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ

ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ

ತಂಬಾಕಿನಿಂದ ಜೀವನದ ಜೊತೆ ಜೀವವು ಹಾಳಾಗುವುದಲ್ಲದೇ, ಮುಂದಿನ ಪೀಳಿಗೆ ದಾರಿ ತಪ್ಪುವ ಸಾಧ್ಯತೆ ಹೆಚ್ಚು. ಹಾಗಾಗಿ ತಂಬಾಕು ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Strict actions by Mysuru deputy commissioner Dr K.V. Rajendra for tobacco control, here see details, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X