• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೊಬೈಲ್ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

|

ಮೈಸೂರು, ನವೆಂಬರ್.15:ಮೊಬೈಲ್ ಕಳೆದುಹೋಯಿತು ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.

ಟೆರೆಸ್ ನಿಂದ ಹಾರಿ ಅಜ್ಜಿ ಸಾವು, ಒಂದು ಗಾಯವೂ ಆಗದೆ ಬದುಕಿತು ಮೊಮ್ಮಗು!

ಮೃತಪಟ್ಟ ವಿದ್ಯಾರ್ಥಿನಿಯ ಹೆಸರು ನಿಖಿತಾ (16). ಗಾಯಿತ್ರಿಪುರಂನಲ್ಲಿರುವ ಗಣಪತಿ ಸಚ್ಚಿದಾನಂದ ಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ನಿಖಿತಾ ಇತ್ತೀಚೆಗೆ ಮೊಬೈಲ್ ಕಳೆದುಕೊಂಡಿದ್ದಳು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಬೆಂಗಳೂರು : ಅಪಾರ್ಟ್‌ಮೆಂಟ್ ನಿರ್ಮಿಸಿದ್ದ ಉದ್ಯಮಿ ಆತ್ಮಹತ್ಯೆ

ನಿಖಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ತನ್ನ ಸಹೋದರ ಬಬ್ಲು ಎಂಬುವವರ ಜೊತೆ ನಿನ್ನೆ ಸಂಜೆ ಮಾತನಾಡಿದ್ದು, ಅಪ್ಪ ಕೊಡಿಸಿದ ಮೊಬೈಲ್ ಕಳೆದು ಹೋಗಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.

ಬೆಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಇದು ಮೊಬೈಲ್ ನಾಪತ್ತೆಯಿಂದ ಆದ ಆತ್ಮಹತ್ಯೆಯೋ ಅಥವಾ ಬೇರೆ ಕಾರಣ ಏನಾದರೂ ಇದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದು, ಕಾರಣವನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ.

English summary
Student committed suicide for lost mobile phone.This incident took place in Gandhinagar, Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X