ವಿದ್ಯಾರ್ಥಿ ಕಾಲಿನ ಮೇಲೆ ಹರಿದ ಬಸ್; ಬೋಗಾದಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು, ಫೆಬ್ರವರಿ 12: ಕಾಲಿನ ಮೇಲೆ ಸಿಟಿ ಬಸ್ ಹರಿದು ವಿದ್ಯಾರ್ಥಿಗೆ ಗಂಭೀರ ಗಾಯವಾಗಿರುವ ಘಟನೆ ಬೋಗಾದಿ ರಸ್ತೆಯಲ್ಲಿ ಸಂಭವಿಸಿದೆ.
ಬಸ್ ಹತ್ತಲು ಹೋಗಿ ವಿದ್ಯಾರ್ಥಿ ಕೆಳಗೆ ಬಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಬಸ್ ನಿಲ್ಲಿಸದಿದ್ದರಿಂದ ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಆಯತಪ್ಪಿ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಕಿರಣ್ ಎಂಬ ವಿದ್ಯಾರ್ಥಿ ಕಾಲಿನ ಮೇಲೆ ಬಸ್ ಚಕ್ರ ಹರಿದಿದೆ. ಈತ ಮಹಾರಾಜ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಾನೆ.

ಬಸ್ ನಿಲ್ಲಿಸದಿದ್ದಕ್ಕೆ ಕೆ ಎಸ್ ಆರ್ ಟಿಸಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದ್ದಿಗೆ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಕೆ ಎಸ್ಆರ್ ಟಿಸಿ ಅಧಿಕಾರಿಗಳು ಬಂದು ಪರಿಹಾರ ನೀಡುವಂತೆ ಆಗ್ರಹಿಸಿದರು. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.












Click it and Unblock the Notifications