ಡಾ.ಜಿ. ಪರಮೇಶ್ವರ್ ಡಿಸಿಎಂ ಹುದ್ದೆಗೂ ಬಂತು ಕಂಟಕ
ಮೈಸೂರು, ಜೂನ್ 1: ಇತ್ತೀಚೆಗಷ್ಟೇ ಮೈತ್ರಿ ಸರ್ಕಾರದ ಸಹಭಾಗಿತ್ವದಲ್ಲಿ ರಾಜ್ಯದ ನೂತನ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಡಾ.ಜಿ. ಪರಮೇಶ್ವರ್ ಅವರಿಗೆ ಕಂಟಕ ಎದುರಾಗಿದೆ.
ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವಾಗಿದ್ದು, ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಮೈಸೂರು ಮೂಲದ ಶೇಖರ್ ಐಯ್ಯರ್ ಎಂಬುವವರು ಡಿಸಿಎಂ ಹುದ್ದೆಯನ್ನು ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬುದಿಲ್ಲ.

ಆದರೂ ಕಾನೂನು ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಈ ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.












Click it and Unblock the Notifications