ಅನಂತ್ ಕುಮಾರ್ ರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದರು:ಸುಬುಧೇಂದ್ರ ತೀರ್ಥ ಸ್ವಾಮೀಜಿ

ಮೈಸೂರು, ನವೆಂಬರ್.12: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸಂತಾಪ ಸೂಚಿಸಿದ್ದಾರೆ.

ಅನಂತ್ ಕುಮಾರ್ ಅವರ ಅಕಾಲಿಕ ಮರಣದಿಂದ ರಾಜ್ಯಕ್ಕೆ, ದೇಶಕ್ಕೆ ನಷ್ಟವಾಗಿದೆ. ನಾನು ಅವರನ್ನು ತುಂಬಾ ಹತ್ತಿರದಿಂದ ಕಂಡಿದ್ದೇನೆ. ಅವರ ನಿಧನದಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ ಎಂದರು.

ಅನಂತಕುಮಾರ್ ಹಠಾತ್ ನಿಧನ ತೀವ್ರ ನೋವು ತಂದಿದೆ. ತಮ್ಮ ಅಧಿಕಾರವಧಿಯಲ್ಲಿ ಅಭಿವೃದ್ಧಿಗಾಗಿ ಹೆಚ್ಚು ಶ್ರಮವಹಿಸಿದ್ದಾರೆ. ನಾಡು, ನುಡಿ, ನೆಲ, ಜಲ ರಕ್ಷಣೆ ಮೇಲಿನ ಅವರ ಬದ್ಧತೆ ಬಹು ಎತ್ತರದಲ್ಲಿತ್ತು. ಅವರು ಶ್ರೀ ರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದರು.

Subudhendra Teertha Swamiji pays condolance to Ananth Kumars demise

ಶ್ರೀ ಮಠದೊಂದಿಗೆ ಉತ್ತಮ ಸೌಹಾರ್ದ ಸಂಬಂಧ ಹೊಂದಿದ್ದರು. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ರಾಘವೇಂದ್ರ ಸ್ವಾಮಿ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಶ್ರೀಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+