Mysuru Dasara: ಮಳೆಯ ನಡುವೆಯೂ ಪಾರಂಪರಿಕ ಟಾಂಗಾ ಸವಾರಿ
ದಿನದಿಂದ ದಿನಕ್ಕೆ ಮೈಸೂರು ದಸರಾ ಕಳೆಗಟ್ಟುತ್ತಿದ್ದು, ಹಲವು ಕಾರ್ಯಕ್ರಮಗಳು ನಾಡಹಬ್ಬದ ಮೆರುಗನ್ನು ಹೆಚ್ಚಿಸುತ್ತಿವೆ. ಶನಿವಾರ ಮುಂಜಾನೆಯೇ ತುಂತುರು ಮಳೆಯ ನಡುವೆಯೂ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ದಂಪತಿಗಳು, ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ನೆರೆದಿದ್ದ ಜನರ ಕಣ್ಮನ ಸೆಳೆದರು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ರಂಗಚಾರ್ಲು ಪುರಭವನದ ಆವರಣದಲ್ಲಿ (ಟೌನ್ ಹಾಲ್ ) ನಡೆದ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳಿಗೆ ಟಾಂಗಾ ಸವಾರಿಯನ್ನು ಜೋಡಿಗಳಿಗೆ ಭಾಗಿನ ಕೊಡುವ ಮೂಲಕ ಪ್ರಾರಂಭಿಸಲಾಯಿತು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರಾದ ದೇವರಾಜು ಎ ಮಾತನಾಡಿ, ಸಾಮೂಹಿಕ ವಿವಾಹವನ್ನು ಏರ್ಪಾಡು ಮಾಡಿರುವ ರೀತಿಯಲ್ಲಿ ವೇದಿಕೆಯು ಕಂಗೊಳಿಸುತ್ತಿದೆ. ನೂತನ ದಂಪತಿಗಳಂತೆ ಎಲ್ಲಾ ಜೋಡಿಗಳು ಜನರನ್ನು ಆಕರ್ಷಿಸುತ್ತಿದ್ದು, ತುಂತುರು ಹನಿಯ ನಡುವೆಯೂ ಸುಂದರವಾದ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ ಎಂದರು.
ನಮ್ಮ ಇಲಾಖೆಯು ಪರಂಪರೆಯನ್ನು ಸಂರಕ್ಷಿಸಿ, ರಕ್ಷಿಸಿ ಅದನ್ನು ಮುಂದಿನ ಪೀಳಿಗೆಗೆ ರವಾನಿಸುವಂತಹ ಕೆಲಸವನ್ನು ಮಾಡುತ್ತಿದೆ. ಸಂಸ್ಕೃತಿಯನ್ನು ಪ್ರಚಲಿತಗೊಳಿಸಿ, ಹೆಚ್ಚು ಜನರಿಗೆ ತಲುಪಿಸುವ ಮೂಲಕ ಅದನ್ನು ಕಾಪಾಡಬೇಕಾಗಿದೆ ಎಂದರು.
ಮೈಸೂರಿನ ಮಹಾರಾಜರು ಇಂದಿಗೂ ಕೂಡ ಟಾಂಗಾ ಸವಾರಿಯನ್ನು ಬಳಸುವುದರಿಂದ ಮೈಸೂರು ಎಂದರೆ ಟಾಂಗಾ, ಟಾಂಗಾ ಎಂದರೆ ಮೈಸೂರು ಎಂಬ ಪ್ರತೀತಿ ಇದೆ. ಮೈಸೂರಿಗೆ ಆಗಮಿಸುವಂತಹ ಪ್ರವಾಸಿಗರು ಟಾಂಗಾ ಸವಾರಿಯನ್ನು ಮಾಡದೆ ಹಿಂತಿರುಗುವುದಿಲ್ಲ, ಹಾಗಾಗಿ ಸಾಂಪ್ರದಾಯಿಕ ಉಡುಗೆ ಮತ್ತು ಟಾಂಗಾ ಸವಾರಿ ಇವೆರಡನ್ನು ಒಂದುಗೂಡಿಸಿ ಪಾರಂಪರಿಕ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.
40ಕ್ಕಿಂತ ಅಧಿಕ ಜೋಡಿಗಳು ಭಾಗಿ
ಟಾಂಗಾ ಸವಾರಿಯಲ್ಲಿ ಮೈಸೂರು, ಶಿವಮೊಗ್ಗ, ಹಾಸನ, ಬೆಂಗಳೂರು ಹಾಗೂ ಇನ್ನಿತರೆ ಜಿಲ್ಲೆಗಳಿಂದ ನೋಂದಾಯಿತ ದಂಪತಿಗಳು ಆಯಾ ಜಿಲ್ಲೆಗಳ ಸಾಂಪ್ರದಾಯಿಕ ಉಡುಗೆಯ ಮೂಲಕ ಕಣ್ಮನ ಸೆಳೆದ ಕೊಡಗು, ಮೈಸೂರಿನ ಪಾರಂಪಾರಿಕ ಉಡುಗೆ ತೊಟ್ಟ ದಂಪತಿಗಳು, ಮೈಸೂರು ಪೇಟ ರೇಷ್ಮೆ ಸೀರೆ ತೊಟ್ಟ ದಂಪತಿಗಳು ಹಾಗೂ ಕಿರಿಯ ವಯಸ್ಸಿನಿಂದ ಹಿರಿಯ ವಯಸ್ಸಿನ ಜೋಡಿಗಳು ಭಾಗಿಯಾಗಿ ಜನರ ಗಮನವನ್ನು ತಮ್ಮತ್ತ ಸೆಳೆದುಕೊಂಡರು.
25 ಟಾಂಗಾ ಗಾಡಿಗಳಲ್ಲಿ ದಂಪತಿಗಳಿಗೆ ನಗರದ ಐತಿಹಾಸಿಕ ರಸ್ತೆಗಳಲ್ಲಿ ಟಾಂಗಾ ಸವಾರಿಯನ್ನು ನೋಡಿ ಜನರು ಕಣ್ತುಂಬಿ ಕೊಂಡರು. ದಸರಾ ಆಚರಣೆಯಲ್ಲಿ ಹಲವು ಕಾರ್ಯಕ್ರಮಗಳು ಜನಮನ ಸೆಳೆಯುತ್ತಿವೆ. ಯುವ ದಸರಾ, ರಂಗೋಲಿ ಸ್ಪರ್ಧೆ, ಜಾವಾ ಬೈಕ್ ಪ್ರದರ್ಶನ, ರೈತರ ದಸರಾ ಲಕ್ಷಾಂತರ ಮಂದಿಯನ್ನು ತನ್ನತ್ತ ಸೆಳೆಯುತ್ತಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications