ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ
Recommended Video

ಮಂಡ್ಯ, ಮಾರ್ಚ್ 20:ಮಂಡ್ಯದಲ್ಲಿ ಚುನಾವಣಾ ಕಣ ಕಾವೇರಿದ್ದು, ರಾಹುಕಾಲಕ್ಕೆ ಮೊದಲೇ ಮಂಡ್ಯ ಡಿಸಿ ಕಚೇರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಟಿ ಸುಮಲತಾ ಅಂಬರೀಶ್ ಇಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಅಪಾರ ಸಂಖ್ಯೆಯಲ್ಲಿ ಸುಮಲತಾ ಅವರ ಅಭಿಮಾನಿಗಳು ಜಮಾಯಿಸಿದ್ದು, ನಾಮಪತ್ರ ಸಲ್ಲಿಸುವ ವೇಳೆ ಅಹಿಂದ ನಾಯಕರು ಸಾಥ್ ನೀಡಿದರು. ಆ ನಂತರ ಸುಮಲತಾ ಬೆಂಬಲಿಗರಿಂದ ರೋಡ್ ಶೋ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದ ಸುಮಲತಾ ಅವರು, ನೇರವಾಗಿ ಮಂಡ್ಯ ತಾಲೂಕು ಇಂಡುವಾಳಿಗೆ ಆಗಮಿಸಿ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಅವರ ನಿವಾಸಕ್ಕೆ ತೆರಳಿದರು. ನಟ ಯಶ್ ಅವರೂ ಸಚ್ಚಿದಾನಂದ ನಿವಾಸಕ್ಕೆ ಆಗಮಿಸಿದ್ದರು.
ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸುಮಲತಾಗೆ, ಪುತ್ರ ಅಭಿಷೇಕ್, ನಟ ಯಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್ ಸೋದರನ ಪುತ್ರ ಮಧುಸೂದನ್, ನಿರ್ದೇಶಕ ನಾಗಶೇಖರ್, ಸೇರಿದಂತೆ ಹಲವರು ಸಾಥ್ ನೀಡಿದರು. ನಂತರ ದರ್ಶನ್ ಕೂಡ ಬಂದು ಸೇರಿದರು.
ಮೂರು ಸೆಟ್ ಗಳಲ್ಲಿ ಸುಮಲತಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರತಿ ಸೆಟ್ ಗೂ 10 ಮಂದಿ ಅಹಿಂದ ಸೂಚಕರು ಸಹಿ ಹಾಕಿದ್ದಾರೆ.
ಸುಮಲತಾ ನಾಮಪತ್ರ ಸಲ್ಲಿಸಿದ ನಂತರ ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶಕ್ಕೆ ಮೆರವಣಿಗೆ ಮೂಲಕ ತೆರಳಿ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.












Click it and Unblock the Notifications