ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ

|
Google Oneindia Kannada News

ಮೈಸೂರು, ಜುಲೈ 07 : ಮರಳು ಗಣಿಗಾರಿಕೆಯ ಲಂಚ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿರುವ ಲೋಕೋಪಯೋಗಿ ಸಚಿವ ಎಚ್. ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ ರಾಜ್ಯ ಸರ್ಕಾರ ನೀಡಿ ಆದೇಶ ಹೊರಡಿಸಿದೆ.

ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ಸುನೀಲ್‌ ಬೋಸ್‌ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

Sunil Bose appointed as the president of housing board awareness committee

ಡಾ.ಬಿ.ಆರ್‌.ಅಂಬೇಡ್ಕರ್‌ ನಿವಾಸ್ ಯೋಜನೆಯನ್ನು ಅನುಷ್ಠಾನಗೊಳಿಸಿ ಫ‌ಲಾನುಭವಿಗಳ ಆಯ್ಕೆ ಬಗ್ಗೆ ಹಾಗೂ ವಸತಿ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಗ್ರಾಮೀಣ ವಸತಿ ಯೋಜನೆಗೆ ಸಂಬಂಧಿಸಿದಂತೆ, ನರಸೀಪುರ ವಿಧಾನಸಭಾ ಕ್ಷೇತ್ರದ ಜಾಗೃತಿ ಸಮಿತಿಗೆ ಅಧ್ಯಕ್ಷರು ಹಾಗೂ ಅಧಿಕಾರೇತರ ಸದಸ್ಯರನ್ನು ನೇಮಿಸಿ ವಸತಿ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸಿ.ಎಸ್‌. ಆದೇಶ ಹೊರಡಿಸಿದ್ದಾರೆ.

ಲಂಚ ಪ್ರಕರಣದಲ್ಲಿ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಕಂಟಕಲಂಚ ಪ್ರಕರಣದಲ್ಲಿ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಕಂಟಕ

ಚುನಾಯಿತ ಜನಪ್ರತಿನಿಧಿಯಲ್ಲದಿದ್ದರೂ ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿಲ್ಲದಿದ್ದರೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

ಹಿನ್ನೆಲೆ ಕಳೆದ ಎರಡು ತಿಂಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯರ ಪುತ್ರ ಡಾ.ಯತೀಂದ್ರ ಅವರನ್ನು ವರುಣಾ ವಿಧಾನಸಭಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಇದೀಗ ಸಚಿವ ಡಾ.ಎಚ್‌.ಸಿ.ಮಹದೇವಪ್ಪರ ಪುತ್ರ ಸುನೀಲ್‌ ಬೋಸ್‌ ಅವರನ್ನು ನೇಮಕ ಮಾಡಲಾಗಿದೆ. ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸುನೀಲ್ ಬೋಸ್ ಪ್ರಬಲ ಆಕಾಂಕ್ಷಿಯಾಗಿದ್ದರು.

ಆದರೆ ಮರಳು ಗಣಿಗಾರಿಕೆ ಲಂಚ ಪ್ರಕರಣದಲ್ಲಿ ಸುನೀಲ್ ಹೆಸರು ಕೇಳಿ ಬಂದ ಕಾರಣ ಸ್ಪರ್ದೆಯಿಂದ ಹಿಂದೆ ಸರಿಯುವಂತೆ ಮಾಡಿತ್ತು.

English summary
Following in the footsteps of Chief Minister Siddaramaiah, his lieutenant PWD and District in-charge Minister H C Mahadevappa has nominated his son Sunil Bose as the chairman of the T Narsipur Assembly Constituency Awareness Committee on Housing Schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X