Get Updates
Get notified of breaking news, exclusive insights, and must-see stories!

ಜನವರಿ 26ರಿಂದ ಸುತ್ತೂರು ಜಾತ್ರೆ: ಏನೆಲ್ಲ ವಿಶೇಷತೆಗಳಿವೆ ಗೊತ್ತಾ?

ಮೈಸೂರು, ಜನವರಿ, 24: ಮೈಸೂರು ವ್ಯಾಪ್ತಿಯಲ್ಲಿ ತನ್ನದೇ ಆದ ವಿಶೇಷತೆಗಳ ಮೂಲಕ ನಡೆಯುವ ಸುತ್ತೂರು ಜಾತ್ರೆ ಈ ಬಾರಿ ಜನವರಿ 26ರಿಂದ 31ರವರೆಗೆ ನಡೆಯಲಿದೆ. ಹತ್ತೂರು ಜಾತ್ರೆಗೂ ಮಿಗಿಲಾಗಿ ನಡೆಯುವಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕಲೆ, ಸಂಸ್ಕೃತಿ, ಕೃಷಿ, ಧಾರ್ಮಿಕ, ಹೀಗೇ ಹತ್ತಾರು ವಿಶೇಷತೆಗಳು ಜಾತ್ರೆಯಲ್ಲಿ ಮೇಳೈಸಲಿದ್ದು, ಸದ್ಯ ಇಡೀ ಸುತ್ತೂರು ಮಧುವಣಗಿತ್ತಿಯಂತೆ ತಯಾರಾಗುತ್ತಿರುವುದು ಎದ್ದು ಕಾಣಿಸುತ್ತಿದೆ.

ನಮಝನಗೂಡು ತಾಲೂಕಿನ ಕಪಿಲಾ ನದಿ ತಟದ ಸುತ್ತೂರು ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ 6 ದಿನಗಳ ಜಾತ್ರೆ ನಡೆಯುತ್ತಿದ್ದು, ಈ ಜಾತ್ರೆಯಲ್ಲಿ ಹತ್ತು ಹಲವು ವಿಶೇಷತೆಗಳಿದ್ದು ವಿಭಿನ್ನ ಮತ್ತು ವಿಶಿಷ್ಟವಾಗಿ ಗಮನಸೆಳೆಯಲಿದೆ. ಜಾತ್ರೆಯಲ್ಲಿ ಪಾಲ್ಗೊಳ್ಳಲೆಂದೇ ರಾಜ್ಯ ಮತ್ತು ಹೊರ ರಾಜ್ಯದ ಲಕ್ಷಾಂತರ ಮಂದಿ ಆಗಮಿಸಲಿದ್ದು, ಯಾವುದೇ ರೀತಿಯ ತೊಂದರೆಗಳು ಆಗದಂತೆ ಸರ್ವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಜಾತ್ರೆಯು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ.

Suttur Jatra Mahotsav start from January 26 2025 What is the special

ಜನವರಿ 26ರಿಂದ ಜಾತ್ರೆ ಆರಂಭವಾಗಲಿದ್ದು, 27ರಂದು ಸಾಮೂಹಿಕ ವಿವಾಹ, ಹಾಲ್ಹರವಿ ಉತ್ಸವ, 28ರಂದು ರಥೋತ್ಸವ, 29ರಂದು ಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷದೀಪೋತ್ಸವ, 30ರಂದು ತೆಪ್ಪೋತ್ಸವ, 31ರಂದು ಅನ್ನ ಬ್ರಹ್ಮೋತ್ಸವದ ಜೊತೆಗೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜಾತ್ರೆಯಲ್ಲಿ ನಡೆಯಲಿದೆ.

ಜಾತ್ರೆ ವೇಳೆ 31ನೇ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆ ಏರ್ಪಡಿಸಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು 800ಕ್ಕೂ ಹೆಚ್ಚು ಪುರುಷ, ಮಹಿಳಾ, ಮಕ್ಕಳ ತಂಡಗಳು ಭಾಗವಹಿಸಲಿದ್ದು, ಪ್ರತಿ ವಿಭಾಗಕ್ಕೂ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ.

ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಸ್ತುಪ್ರದರ್ಶನದಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಕರಕುಶಲ ಉತ್ಪನ್ನಗಳು, ಗ್ರಾಮೀಣ ಉತ್ಪನ್ನಗಳು, ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನಗಳು ಹಾಗೂ ಗುಡಿ ಕೈಗಾರಿಕೆ ವಸ್ತುಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ.

ಜೆಎಸ್ಎಸ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸಿದ್ಧಪಡಿಸಿರುವ 200ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳಿರುತ್ತವೆ. ಸರ್ಕಾರದ ಅಭಿವೃದ್ಧಿ ಇಲಾಖೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಮಹಿಳಾ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ.

ಸಾಮೂಹಿಕ ವಿವಾಹದಲ್ಲಿ 156 ಜೋಡಿ ಭಾಗಿ: ಜ.27ರಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಂತರ್ಜಾತಿ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ. ವಿವಾಹಗಳ ನೋಂದಣಿಯನ್ನು ಮಾಡಿಸಲಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ಗಳನ್ನು ನೀಡಲಾಗುತ್ತದೆ.

ಈ ಬಾರಿ ವಿವಾಹದಲ್ಲಿ 156 ಜೋಡಿ ಸತಿಪತಿಗಳಾಗುತ್ತಿದ್ದು, ತಮಿಳುನಾಡಿನ 18 ಜೋಡಿ, 3 ವಿಶೇಷ ಚೇತನ ಜೋಡಿ, 1 ಅಂತರ್ ಧರ್ಮೀಯ ಜೋಡಿ ಭಾಗವಹಿಸುತ್ತಿರುವುದು ವಿಶೇಷ. ಈವರೆಗೆ ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ 3,200ಕ್ಕೂ ಹೆಚ್ಚು ಮಂದಿ ಸತಿಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣಪತ್ರ ಹಾಗೂ ನೋಂದಣಿಪತ್ರಗಳನ್ನು ಸಲ್ಲಿಸಿ ಸರ್ಕಾರ ನೀಡುವ ಪ್ರೋತ್ಸಾಹಧನ ಪಡೆದುಕೊಳ್ಳಲು ಅವಕಾಶವಿದೆ.

ಜನವರಿ 29ರಂದು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೇರೆ ಬೇರೆ ವಿಭಾಗಗಳಲ್ಲಿ, ಸ್ಥಳದಲ್ಲೇ ವಿವಿಧ ವಿಷಯಗಳ ಕುರಿತು ಚಿತ್ರ ರಚಿಸುವ ರಾಜ್ಯಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಳಿಪಟ ಸ್ಪರ್ಧೆ ಆಯೋಜಿಸಲಾಗಿದೆ. ರಾಜ್ಯ ಹಾಗೂ ಹೊರರಾಜ್ಯ ಕಲಾವಿದರುಗಳ ಕಲಾಕೃತಿಗಳ ಪ್ರದರ್ಶನ, ಮಾರಾಟ ಹಾಗೂ ಸ್ಥಳದಲ್ಲೇ ಸಾರ್ವಜನಿಕರ ಭಾವಚಿತ್ರ ರಚನೆಮಾಡಿ ಮಾರಾಟ ಮಾಡುವ ವ್ಯವಸ್ಥೆ ಜಾತ್ರೆಯ ಎಲ್ಲಾ ದಿನಗಳಲ್ಲಿಯೂ ಇರುತ್ತದೆ.

ದೇಸಿ ಆಟಗಳಿಗೆ ಹೆಚ್ಚಿನ ಒತ್ತು: ಜನವರಿ 30ರಂದು ರಾಷ್ಟçಮಟ್ಟದ ನಾಡ ಕುಸ್ತಿ ಪಂದ್ಯಗಳು ನಡೆಯಲಿವೆ. ಈ ಬಾರಿ ಎರಡು ಮಾರ್ಪಿಟ್ ಕುಸ್ತಿಗಳಿರುತ್ತವೆ. ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಿಗೆ ಸುತ್ತೂರು ಕೇಸರಿ ಪ್ರಶಸ್ತಿ ಹಾಗೂ ಸ್ಥಳೀಯ ಉತ್ತಮ ಕುಸ್ತಿ ಸ್ಪರ್ಧೆ ವಿಜೇತರಿಗೆ ಸುತ್ತೂರು ಕುಮಾರ ಪ್ರಶಸ್ತಿ ನೀಡಲಾಗುತ್ತದೆ.

ಜನವರಿ 26ರಿಂದ 31ರವರೆಗೆ ಜಾತ್ರೆಯ ಎಲ್ಲಾ ದಿನಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಸಾರ್ವಜನಿಕರ ಮನೋರಂಜನೆಗಾಗಿ ಜಾತ್ರೆಯ ಎಲ್ಲ ದಿನಗಳಲ್ಲಿ ದೋಣಿ ವಿಹಾರ ಏರ್ಪಡಿಸಲಾಗಿದೆ. ಜೊತೆಗೆ ಪುರುಷರಿಗೆ 28ರಂದು, ಮಹಿಳೆಯರಿಗೆ 29ರಂದು, ಜೆಎಸ್ಎಸ್ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 28ರಿಂದ 30ರವರೆಗೆ ಸ್ಪರ್ಧೆಗಳು ನಡೆಯಲಿವೆ.

ದೇಸಿ ಆಟಗಳಾದ ಕೆಸರುಗದ್ದೆ ಓಟ, ಹಗ್ಗ-ಜಗ್ಗಾಟ, ಕುಂಟೆಬಿಲ್ಲೆ, ಅಳಿಗುಳಿಮನೆ, ಆಣೆಕಲ್ಲು, ಚದುರಂಗ, ಬುಗುರಿ, ಚೌಕಬಾರದ ಜತೆಗೆ 50 ಕೆಜಿ ಭಾರದ ಚೀಲ ಹೊತ್ತು ಓಡುವುದು, ಕಲ್ಲುಗುಂಡು ಎತ್ತುವುದು, ತುಂಬಿದ ಬಿಂದಿಗೆಯನ್ನು ತಲೆಯ ಮೇಲೆ ಹೊತ್ತು ಓಡುವ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಾದವರಿಗೆ ನಗದು ಬಹುಮಾನ, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ನೀಡಲಾಗುತ್ತದೆ.

ಪ್ರತಿ ವರ್ಷದಂತೆ ಈ ವರ್ಷವೂ ದನಗಳ ಜಾತ್ರೆ ಏರ್ಪಡಿಸಲಾಗಿದೆ. ರೈತರು ಎತ್ತು, ಹಸು, ಹೋರಿಗಳನ್ನು ಕೊಂಡುಕೊಳ್ಳಲು ಹಾಗೂ ಮಾರಾಟ ಮಾಡಲು ಅವಕಾಶವಿರುತ್ತದೆ. ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.

ಗದ್ದುಗೆ ಆವರಣದಲ್ಲಿ ಧರ್ಮ ಸಂದೇಶ: ಉತ್ತಮ ರಾಸುಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಜನವರಿ 30ರ ತೆಪ್ಪೋತ್ಸವದಂದು ನಂಜನಗೂಡಿನ ಯುವ ಬ್ರಿಗೇಡ್ ಸಹಯೋಗದಲ್ಲಿ ಕಪಿಲಾರತಿ ಏರ್ಪಡಿಸಲಾಗಿದೆ. ಜೆಎಸ್ಎಸ್ ಅಂತರಸAಸ್ಥೆಗಳ ಸಾಂಸ್ಕೃತಿಕ ಮೇಳದಲ್ಲಿ 3,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಭರತನಾಟ್ಯ, ಸಾಮೂಹಿಕ ನೃತ್ಯ, ಶಾಸ್ತ್ರೀಯ ಸಂಗೀತ, ವಚನಾಧಾರಿತ ನೃತ್ಯ, ಸಾಮೂಹಿಕ ಗಾಯನ ಸ್ಪರ್ಧೆಗಳ ಮೂಲಕ ಸುಮಾರು 400ಕ್ಕೂ ಹೆಚ್ಚು ಕಾರ್ಯಕ್ರಮ ಆಯೋಜಿಸಲಾಗಿದೆ.

ಗದ್ದುಗೆಯ ಆವರಣದಲ್ಲಿ ನಗರಪ್ರದೇಶಗಳ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರಿಂದ ಗಾಯನ, ನೃತ್ಯ ಹಾಗೂ ನಾಟಕ ಪ್ರದರ್ಶನವಿರಲಿದೆ. ಜತೆಗೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳ ಕಲಾತಂಡಗಳು ಕಲಾಪ್ರದರ್ಶನ ನೀಡಲಿವೆ. ಜಾತ್ರೆಯ ವೇಳೆ ಜನವರಿ 26ರಂದು ಮತ್ತು 28ರಿಂದ 31ರವರೆಗೆ ಪ್ರತಿದಿನ ಬೆಳಗ್ಗೆ ಜೀಮರಹಳ್ಳಿ, ನಗರ್ಲೆ, ಆಯರಹಳ್ಳಿ, ಬಸಳ್ಳಿಹುಂಡಿ ಮತ್ತು ಸೋಮೇಶ್ವರಪುರ ಗ್ರಾಮಗಳಲ್ಲಿ ಸ್ನೇಹ- ಸೌಹಾರ್ದ- ಶಾಂತಿ ಪ್ರಾರ್ಥನಾ ಸಂಚಲನದ ಪ್ರಭಾತ್ ಪೇರಿ ನಡೆಯಲಿದೆ. ನಂತರ ಒಬ್ಬ ಶ್ರೀಗಳು ಧ್ವಜಾರೋಹಣ ನೆರವೇರಿಸುತ್ತಾರೆ, ಮತ್ತೊಬ್ಬರು ಧರ್ಮಸಂದೇಶ ನೀಡುತ್ತಾರೆ. 27ರಂದು ಶ್ರೀಕ್ಷೇತ್ರದ ಗದ್ದುಗೆ ಆವರಣದಲ್ಲಿ ದ್ವಜಾರೋಹಣ ಮತ್ತು ಧರ್ಮ ಸಂದೇಶವಿರಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+