• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮಮಂದಿರ ಪೂಜೆಯಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭಾಗಿಯಿಲ್ಲ

By ಮೈಸೂರು ಪ್ರತಿನಿಧಿ
|

ಮೈಸೂರು, ಆಗಸ್ಟ್‌ 4: ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ಭಾಗವಹಿಸುವಂತೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರಿಗೆ ಆಹ್ವಾನ ಬಂದಿದೆ. ಆದರೆ ಅವರು ಕೋವಿಡ್ ಕಾರಣದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವಹಿಂದು ಪರಿಷತ್ ಹಾಗೂ ಆರ್ ಎಸ್ ಎಸ್ ಮುಖಂಡರು ಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಆಹ್ವಾನಿಸಿದ್ದರು. ಆದರೆ ಎಲ್ಲೆಡೆ ಕೊರೊನಾ ಸೋಂಕು ಹಾಗೂ ಭದ್ರತೆ ಹಿನ್ನೆಲೆಯಲ್ಲಿ ನೇರವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲವೆಂದು ಶ್ರೀಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ರಾಮಮಂದಿರ ಭೂಮಿ ಪೂಜೆಗೆ ಮುಹೂರ್ತ ಕೊಟ್ಟ ಬೆಳಗಾವಿ ಸ್ವಾಮೀಜಿಗೆ ಬೆದರಿಕೆ ಕರೆ

ಇಡೀ ದೇಶವೇ ಸಂತೋಷ, ಸಂಭ್ರಮದಲ್ಲಿ ತೇಲುವ ಅಪೂರ್ವ ಧಾರ್ಮಿಕ ಆಚರಣೆ ಇದಾಗಿದೆ. ಕೋಟಿ ಕೋಟಿ ಭಾರತೀಯರು ನೂರಾರು ವರ್ಷಗಳಿಂದ ಈ ಅಮೃತ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಭಕ್ತರೆಲ್ಲರು ತಾವು ಇರುವಲ್ಲಿಯೇ ಕಾರ್ಯಕ್ರಮ ವೀಕ್ಷಿಸಿ ಧನ್ಯರಾಗಬಹುದಾಗಿದೆ. ಭರತ ಖಂಡದ ಈ 'ನ ಭೂತೋ ನ ಭವಿಷ್ಯತಿ' ಎಂಬ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ. ಮಂದಿರ ನಿರ್ಮಾಣ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿ ಎಂದು ಹಾರೈಸಿದ್ದಾರೆ.

English summary
Sutturu Shivarathri Deshikendra swamiji of mysuru has been invited to participate in the Bhoomi Pooja of the construction of the Ram Mandir in Ayodhya tomorrow. But he will not attend because of coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X