ಈಜುಕೊಳ ನಿರ್ಮಾಣ ವಿವಾದ; ರೋಹಿಣಿ ಸಿಂಧೂರಿಗೆ ಹೊಸ ಸಂಕಷ್ಟ

ಮೈಸೂರು, ಜೂನ್ 03; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪಗಳು ಕೇಳಿ ಬರುತ್ತಿವೆ. ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ ಈಜು ಕೊಳ ಮತ್ತು ಜಿಮ್​ ನಿರ್ಮಾಣ ಮಾಡಲಾಗಿದೆ ಎಂಬುದು ಒಂದು ಆರೋಪ.

ಗುರುವಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಾದೇಶಿಕ ಆಯುಕ್ತರಿಗೆ ಈಜುಕೊಳ ಮತ್ತು ಜಿಮ್ ನಿರ್ಮಾಣದ ಕುರಿತು 7 ದಿನಗಳಲ್ಲಿ ವರದಿಯನ್ನು ನೀಡುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಯಾವುದೇ ಹೊಸ ಕಟ್ಟಡ ಕಾಮಗಾರಿಯನ್ನು ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ ರೋಹಿಣಿ ಸಿಂಧೂರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ ಎಂಬುದು ಆರೋಪವಾಗಿದೆ.

Swimming Pool Construction In DC House Chief Secretary Seeks Report

ಈಜುಕೊಳ ನಿರ್ಮಾಣ ವಿಚಾರದಲ್ಲಿಯೇ ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ವೈಯಕ್ತಿಕ ಮೋಜಿಗಾಗಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡುವ ಅಧಿಕಾರಿಗಳಿಂದ ಜನಪ್ರತಿನಿಧಿಗಳು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಶಿಲ್ಪನಾಗ್ ರಾಜೀನಾಮೆ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯ ವೈಖರಿ ಬಗ್ಗೆ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಗುರುವಾರ ರೋಹಿಣಿ ಸಿಂಧೂರಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ವೈಯಕ್ತಿಕವಾಗಿ ನಾನು ದಾಳಿ ಮಾಡಿದ್ದರೆ ಡಿಸಿ ಮನೆಯಲ್ಲಿ ನಿರ್ಮಿಸಿದ ಈಜುಕೊಳ, ಜಿಮ್ ನಿರ್ಮಾಣ ಕುರಿತು ಪಾಲಿಕೆ ವತಿಯಿಂದ ನೋಟಿಸ್ ನೀಡಬಹುದಿತ್ತು ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+