ಈಜುಕೊಳ ನಿರ್ಮಾಣ ವಿವಾದ; ಸ್ಪಷ್ಟನೆ ಕೊಟ್ಟ ರೋಹಿಣಿ ಸಿಂಧೂರಿ

ಮೈಸೂರು, ಜೂನ್ 06; ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕಗೊಂಡಿದ್ದಾರೆ. ಆದರೆ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಮಾಡಿದ ವಿವಾದ ಹಾಗಯೇ ಇದೆ.

ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಿಸಿರುವುದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ಸರ್ಕಾರಕ್ಕೆ ರೋಹಿಣಿ ಸಿಂಧೂರಿ ಉತ್ತರ ನೀಡಿದ್ದಾರೆ. ಪ್ರಾದೇಶಿಕ ಆಯುಕ್ತ ಡಾ. ಜಿ. ಸಿ ಪ್ರಕಾಶ್‌ಗೆ ಎರಡು ಪುಟಗಳ ಉತ್ತರವನ್ನು ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ವಸತಿ ಕಚೇರಿ ಆವರಣದಲ್ಲಿ ಈಜುಕೊಳ ನಿರ್ಮಿಸಬೇಕೆಂಬುದು 5 ವರ್ಷಗಳ ಹಿಂದಿನ ಯೋಜನೆಯಾಗಿದೆ. ಹೊಸ ತಂತ್ರಜ್ಞಾನ ಬಳಸಿ ನಿರ್ಮಾಣ ಕಾರ್ಯ ನಡೆಸಲು ನಿರ್ಮಿತಿ ಕೇಂದ್ರ ನಿರ್ಧರಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳ ನಿರ್ಮಾಣವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Swimming Pool Construction Rohini Sindhuri Clarification

ನಿರ್ಮಿತಿ ಕೇಂದ್ರದ 28.72 ಲಕ್ಷದಲ್ಲಿ ಈಜುಕೊಳ ನಿರ್ಮಾಣವಾಗಿದೆ. ಪಾರಂಪರಿಕ ಕಟ್ಟಡಕ್ಕೆ ಧಕ್ಕೆಯಾಗಿಲ್ಲ ಎಂದು ಎರಡು ಪುಟಗಳ ಸ್ಪಷ್ಟನೆಯಲ್ಲಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಈಜುಕೊಳ ನಿರ್ಮಾಣದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಾದೇಶಿಕ ಆಯುಕ್ತರಿಂದ ವರದಿ ಕೇಳಿದ್ದರು.

ಪಾರಂಪರಿಕ ಕಟ್ಟಡ; ಮೈಸೂರು ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ಪಾರಂಪರಿಕ ಕಟ್ಟಡವಾಗಿದೆ. ಯಾವುದೇ ಹೊಸ ಕಟ್ಟಡ ಕಾಮಗಾರಿಯನ್ನು ಅಲ್ಲಿ ಮಾಡುವಂತಿಲ್ಲ. ಆದರೆ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ ಎಂಬುದು ಆರೋಪ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ವೈಯಕ್ತಿಕ ಮೋಜಿಗಾಗಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡುವ ಅಧಿಕಾರಿಗಳಿಂದ ಜನಪ್ರತಿನಿಧಿಗಳು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ಸಹ ಈ ವಿಚಾರ ಪ್ರಸ್ತಾಪ ಮಾಡಿದ್ದರು. "ವೈಯಕ್ತಿಕವಾಗಿ ನಾನು ದಾಳಿ ಮಾಡಿದ್ದರೆ ಡಿಸಿ ಮನೆಯಲ್ಲಿ ನಿರ್ಮಿಸಿದ ಈಜುಕೊಳ, ಜಿಮ್ ನಿರ್ಮಾಣ ಕುರಿತು ಪಾಲಿಕೆ ವತಿಯಿಂದ ನೋಟಿಸ್ ನೀಡಬಹುದಿತ್ತು ಅಲ್ಲವೇ?" ಎಂದು ಪ್ರಶ್ನೆ ಮಾಡಿದ್ದರು.

ಸರ್ಕಾರ ಶನಿವಾರ ಶಿಲ್ಪಾನಾಗ್ ಮತ್ತು ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ ಪ್ರಾದೇಶಿಕ ಆಯುಕ್ತರು ಮುಖ್ಯ ಕಾರ್ಯದರ್ಶಿಗಳಿಗೆ ಈಜುಕೊಳ ನಿರ್ಮಾಣದ ಕುರಿತು ವರದಿಯನ್ನು ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+