ತಲಕಾಡು ದೇಗುಲ ಐತಿಹಾಸಿಕ, ಪುರಾಣ ಕಥೆ
ತಲಕಾಡು, ನ.29: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಇತಿಹಾಸ ಪ್ರಸಿದ್ಧ ತಲಕಾಡಿನ ಪಂಚಲಿಂಗ ದರ್ಶನ ಉತ್ಸವ ನ.28 ರಿಂದ ಆರಂಭಗೊಂಡಿದೆ. ಡಿ. 8ರ ತನಕ ನಡೆಯಲಿದೆ. ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ತಲಕಾಡಿನಲ್ಲಿ ಇನ್ನೂ ಅಲ್ಲಲ್ಲಿ ಕಾಮಗಾರಿಗಳು ನಡೆಯುತ್ತಲೇ ಇದೆ. ಈ ನಡುವೆ ನಿಧಾನಗತಿಯಿಂದ ಭಕ್ತರು ಆಗಮಿಸುತ್ತಿದ್ದ್ದಾರೆ.
ಮಾಲಂಗಿ ಮಡುವಾಗಲಿ..ತಲಕಾಡು ಮರಳಾಗಲಿ...ಮೈಸೂರು ಅರಸರಿಗೆ ಮಕ್ಕಳಾಗದಿರಲಿ ಎಂದು ಅಲಮೇಲಮ್ಮ ಶಾಪ ನೀಡಿದ್ದರ ಬಗ್ಗೆ ಎಲ್ಲರಿಗೂ ತಿಳಿದೇ ಇರುತ್ತೆ. ಶಾಪದ ಫಲವೋ ವೈಜ್ಞಾನಿಕ ಅಚ್ಚರಿಯೋ ಎಂಬಂತೆ ತಲಕಾಡು ಮರಳುಗಾಡಿನಂತೆ ಇದೆ. ಪಕ್ಕದಲ್ಲೇ ತುಂಬಿ ಹರಿಯುವ ಕಾವೇರಿ ನದಿ ಇದರೂ ದೇಗುಲಗಳ ಸುತ್ತ ಮುತ್ತ ಎತ್ತ ನೋಡಿದರೂ ಅತ್ತ ಮರಳು ರಾಶಿ ಎದ್ದು ಕಾಣುತ್ತದೆ. ಪಂಚಲಿಂಗ ದರ್ಶನದ ಸಂದರ್ಭದಲ್ಲಿ ಹೆಚ್ಚು ಮರಳು ತುಂಬಿರುವ ಪಾತೇಳ್ವರ, ವೈದ್ಯನಾಥೇಶ್ವರ ದೇವಾಲಯಗಳಲ್ಲಿ ಮರಳನ್ನು ತೆಗೆದು, ಪೂಜೆಗೆ ಅಣಿಗೊಳಿಸಲಾಗುತ್ತದೆ.
ಕಾರ್ತಿಕ ಮಾಸದಲ್ಲಿ ಐದು ಸೋಮವಾರ ಬರುವ ಸಂದರ್ಭದಲ್ಲಿ ಸೂರ್ಯ ವೃಶ್ಚಿಕ ಮಾಸದ ಐದನೇ ಸೋಮವಾರ ಅಮಾವಾಸ್ಯೆ ದಿನ ಪಂಚಲಿಂಗ ದರ್ಶನಕ್ಕೆ ನಡೆಯುತ್ತದೆ. ಈ ಪುಣ್ಯಕಾಲ 3,5,7,12,13 ಹೀಗೆ ಎಷ್ಟು ವರ್ಷಗಳ ಅಂತರದಲ್ಲಿ ದರ್ಶನ ಮಹೋತ್ಸವ ನಡೆಯುತ್ತದೆ.ಪ್ರಮುಖ ಧಾರ್ಮಿಕ ಉತ್ಸವ ಎನಿಸಿರುವ ತಲಕಾಡು ಪಂಚಲಿಂಗ ದರ್ಶನಕ್ಕೆ ಈ ಹಿಂದೆ ಮುಖ್ಯಮಂತ್ರಿಗಳು ಆಗಮಿಸಿ ಭಕ್ತಾದಿಗಳಲ್ಲಿ ಹುರುಪು ತುಂಬಿದ್ದರು. ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿಸಿಕೊಂಡು ತಲಕಾಡಿಗೆ ಬರುತ್ತಾರಾ? ಕಾದು ನೋಡಬೇಕಿದೆ.. ತಲಕಾಡಿನ ಧಾರ್ಮಿಕ, ಐತಿಹಾಸಿಕ ಹಿನ್ನೆಲೆ, ಪಂಚಲಿಂಗಗಳ ಕಥೆ ಮುಂದೆ ಓದಿ [ ದರ್ಶನದ ವೇಳಾಪಟ್ಟಿ ಇಲ್ಲಿದೆ]

ಮುಖ್ಯಮಂತ್ರಿಗಳು ಭಾಗಿ?
1993 ರಲ್ಲಿ ಎಂ. ವೀರಪ್ಪಮೊಯ್ಲಿ, 2006 ರಲ್ಲಿ ಎಚ್.ಡಿ. ಕುಮಾರಸ್ವಾಮಿ, 2009 ರಲ್ಲಿ ಬಿ.ಎಸ್. ಯಡಿಯೂರಪ್ಪ ಪಂಚಲಿಂಗ ದರ್ಶನದಲ್ಲಿ ಭಾಗವಹಿಸಿದ್ದರು.
ಈ ಬಾರಿ ಜಿಲ್ಲೆಯವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಭಾಗವಹಿಸುತ್ತಾರೆ ಎಂಬ ಸುದ್ದಿ ಬಂದಿದೆ. ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರ ಟಿ. ನರಸೀಪುರ ಕ್ಷೇತ್ರದ ಪಕ್ಕದಲ್ಲಿಯೇ ಬರುತ್ತದೆ.1989 ರಿಂದ ಪ್ರತಿ ಮೂರು ವರ್ಷಗಳಿಗೊಮ್ಮೆ ಟಿ. ನರಸೀಪುರದ ತಿರುಮಕೂಡಲಿನಲ್ಲಿ ಮಹಾಕುಂಭಮೇಳ ನಡೆಯುತ್ತದೆ. ಈ ಕಾರ್ಯಕ್ರಮದಲ್ಲೂ ಈ ಹಿಂದಿನ ಮುಖ್ಯಮಂತ್ರಿ ಭಾಗವಹಿಸಿದ್ದಾರೆ.

ಪಂಚಲಿಂಗ ಮಹಿಮೆ : ಅರ್ಕೇಶ್ವರ
ಉತ್ತರವಾಹಿನಿ ಕಾವೇರಿ ತಟದಲ್ಲಿ ಸೂರ್ಯ(ಅರ್ಕ) ತಪಸ್ಸು ಮಾಡಿ ಶಿವನನ್ನು ಒಲಿಸಿಕೊಂಡಿದ್ದ ದ್ಯೋತಕವಾಗಿ ಅರ್ಕೇಶ್ವರ ಹೆಸರಿನಲ್ಲಿ ಲಿಂಗ ರೂಪಿಯಾಗಿ ಶಿವನನ್ನು ಪೂಜಿಸಲಾಗುತ್ತದೆ.

ಪಂಚಲಿಂಗ ಮಹಿಮೆ : ಪಾತಾಳೇಶ್ವರ
ಪೂರ್ವವಾಹಿನಿಯಲ್ಲಿ ತಪೋನಿರತ ವಾಸುಕಿ(ಸರ್ಪ)ಗೆ ಶಿವ ಪ್ರತ್ಯಕ್ಷನಾಗಿದ್ದರಿಂದ ವಾಸುಕೇಶ್ವರನ ಉದಯವಾಯಿತು. ಸರ್ಪದೋಷ ನಿವಾರಣೆಗೆ ಕ್ಷೇತ್ರ ಪ್ರಸಿದ್ಧಿ.

ಪಂಚಲಿಂಗ ಮಹಿಮೆ : ಮರಳೇಶ್ವರ
ಸರಸ್ವತಿಯನ್ನು ವಿವಾಹವಾಗಲು ಅನುಮತಿ ಕೋರಿ ಬ್ರಹ್ಮದೇವ ದಕ್ಷಿಣ ದಿಕ್ಕಿನಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮಿಂದು ಮರಳಿನಲ್ಲಿ ಲಿಂಗ(ಸಂಸ್ಕೃತದಲ್ಲಿ ಸೈತಕ ಎಂದರೆ ಮರಳು) ಮಾಡಿ ಶಿವನನ್ನು ಪೂಜಿಸುತ್ತಾನೆ. ಬ್ರಹ್ಮಹತ್ಯಾದೋಷ ಪರಿಹಾರ ಇಲ್ಲಿ ಸಿಗುತ್ತದೆ

ಪಂಚಲಿಂಗ ಮಹಿಮೆ : ಮಲ್ಲಿಕಾರ್ಜುನ
ಪಶ್ಚಿಮವಾಹಿನಿ ಕಾವೇರಿ ಹರಿಯುವ ಮುಡುಕುತೊರೆ ಅಥವಾ ಸೋಮಗಿರಿಯಲ್ಲಿ ದಿಲೀಪ-ದಮಯಂತಿ ದಂಪತಿಗೆ ವಿಷ ಪ್ರಾಶನ ದೋಷ ನಾಶ ಮಾಡಿದ ಮಲ್ಲಿಕಾರ್ಜುನ ಸ್ವಾಮಿ ಇಲ್ಲಿ ನೆಲೆಸಿದ್ದಾನೆ.
ಮಧ್ಯಮ ಪಾಂಡವ ಅರ್ಜುನ ಇಲ್ಲಿ ಮಲ್ಲಿಕಾ ಪುಷ್ಪಗಳಿಂದ ಶಿವನನ್ನು ಪೂಜಿಸಿದ ಎನ್ನಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಜತೆ ತಲೆಯಲ್ಲಿ ಕಾಮಧೇನುವಿನ ಪಾದದ ಚಿನ್ಹೆ ಜತೆಗೆ ಭ್ರಮರಾಂಭ ದೇವಿಯೂ ಇಲ್ಲಿ ನೆಲೆಸಿದ್ದು ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ

ಪಂಚಲಿಂಗ ಮಹಿಮೆ : ವೈದ್ಯನಾಥೇಶ್ವರ
ಕಾವೇರಿ-ಕಪಿಲಾ ಸಂಗಮದ ಗಜಾರಣ್ಯ ಕ್ಷೇತ್ರದಲ್ಲಿ ತಪಸ್ಸು ಮಾಡಲು ವಶಿಷ್ಠ ಕುಲದ ಸೋಮದತ್ತ ಎಂಬ ಋಷಿ ಇಲ್ಲಿಗೆ ಬರುತ್ತಾರೆ. ಆದರೆ, ಕಾಡಾನೆಯಿಂದ ಸೋಮದತ್ತ ಹತನಾಗುತ್ತಾನೆ. ಮುಂದಿನ ಜನ್ಮದಲ್ಲಿಆನೆಯಾಗಿ ಹುಟ್ಟಿ ಈ ಕ್ಷೇತ್ರದಲ್ಲಿ ಗೋಕರ್ಣ ಕೊಳದಲ್ಲಿ ಮಿಂದು ಲಿಂಗಕ್ಕೆ ಪೂಜೆ ಸಲ್ಲಿಸುತ್ತದೆ.
ತಲ ಮತ್ತು ಕಾಡ ಎಂಬ ಬೇಡರಿಬ್ಬರು ಶಿವಲಿಂಗ ಭಗ್ನಗೊಳಿಸುತ್ತಾರೆ. ಇವರ ವಿರುದ್ಧ ಆನೆ ತಿರುಗಿಬೀಳುತ್ತದೆ. ಶಿವ ಪ್ರತ್ಯಕ್ಷನಾಗಿ ಎಲ್ಲರಿಗೂ ಮೋಕ್ಷ ಕರುಣಿಸುತ್ತಾನೆ. ಗಾಯಗೊಂಡ ಲಿಂಗ ರೂಪಿ ಶಿವನಿಗೆ ಗಿಡಮೂಲಿಕೆಯ ಸುಶ್ರೂಷೆ ಸಿಗುತ್ತದೆ. ವೈದ್ಯನಾಥೇಶ್ವರನ ಜತೆ ಮನೋನ್ಮಣಿ ಅಮ್ಮನವರು ಇಲ್ಲಿ ನೆಲೆಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications