ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗರು

ಮೈಸೂರು, ಜೂನ್ 6 : ಕಳೆದ ಬಾರಿ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶಾಸಕ ತನ್ವೀರ್ ಸೇಠ್ ಅವರಿಗೆ ಇದೀಗ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಬೆಂಬಲಿಗರು ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ರೊಚ್ಚಿಗೆದ್ದ ಬೆಂಬಲಿಗರು ಮೈಸೂರು - ಬೆಂಗಳೂರು ರಸ್ತೆ ತಡೆ ನಡೆಸಿ, ಮೈಮೇಲೆ ಸೀಮೆಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ಸಿನಿಂದ ಯಾರೊಬ್ಬರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆ ಟಯರ್ ಗೆ ಬೆಂಕಿ ಇಟ್ಟು, ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು.

Tanveer sait supporters protested in Mysuru

ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ಸಿನಿಂದ 15 ಹಾಗೂ ಜೆಡಿಎಸ್ ನಿಂದ 8 ಮತ್ತು ಕೆಪಿಜೆಪಿ 1 ಹಾಗೂ ಬಹುಜನ ಸಮಾಜವಾದಿ ಪಕ್ಷದಿಂದ 1 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Tanveer sait supporters protested in Mysuru
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+