ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಡ, ಬಲ ಬೇಡ ಇತಿಹಾಸವನ್ನು ಬೋಧಿಸಿ: ಯದುವೀರ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 31: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತಿದೆ. ಕೆಲವು ಶ್ರೇಷ್ಠ ಇತಿಹಾಸಕಾರರ ಇತಿಹಾಸವನ್ನು ಕೈಬಿಟ್ಟಿರುವುದಕ್ಕೆ ಕೆಲವು ಲೇಖಕರು ತಮ್ಮ ಪಠ್ಯವನ್ನು ಸೇರಿಸುವುದು ಬೇಡ ಎನ್ನುತ್ತಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ , "ಎಡವೂ ಬೇಡ, ಬಲವೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಬೋಧಿಸಿ" ಎಂದು ಸಲಹೆ ನೀಡಿದರು.

ಬಸವಣ್ಣನಿಗೂ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ: ಸ್ವಾಮೀಜಿಗಳಿಂದ ಖಂಡನೆಬಸವಣ್ಣನಿಗೂ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ: ಸ್ವಾಮೀಜಿಗಳಿಂದ ಖಂಡನೆ

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಯದುವೀರ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು" ಎಂದರು.

ಟೆಂಡರ್ ಪ್ರಕ್ರಿಯೆ ಬದಲಾಗಬೇಕು; "ಪಾರಂಪರಿಕ ಕಟ್ಟಡಗಳ ಉಳಿವಿನ ಕುರಿತು ಮಾತನಾಡಿದ ಯದುವೀರ್, "ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡಬೇಕೆಂದಿದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪುನಶ್ವೇತನಕ್ಕೆ ಅನುಮತಿ ಸಿಗುತ್ತಿಲ್ಲ. ಅದು ಕೂಡ ಸರಿಯಾಗಬೇಕು ಎಂದರು. ಆಯುರ್ವೇದಿಕ್ ಆಸ್ಪತ್ರೆ ಚನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು" ಎಂದರು.

Teach history as history: Yaduveer Urs Reaction On Textbook Row

ಹಂಪಾ ನಾಗರಾಜಯ್ಯ ರಾಜೀನಾಮೆ; ಕುವೆಂಪು ಅವರ ನಾಡಗೀತೆಯನ್ನು ಅವಹೇಳನ ಮಾಡಿದ ವಿವಾದ ಭುಗಿಲೆದ್ದ ಬೆನ್ನಲ್ಲೇ ಕುವೆಂಪು ಪ್ರತಿಷ್ಠಾನಕ್ಕೆ ಹಂಪಾ ನಾಗರಾಜಯ್ಯ ರಾಜೀನಾಮೆ ನೀಡಿದ್ದರು. ನಾಡಗೀತೆಗೆ ಅವಮಾನ ಮಾಡಿದ ಬಗ್ಗೆ ಬೇಸರ ವ್ಯಕ್ತಪಡಿಸಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ರಾಷ್ಟ್ರಕವಿ ಕುವೆಂಪು, ನಾಡಗೀತೆಗೆ ಅವಮಾನ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಕಸಾಪ ಆಗ್ರಹ ರಾಷ್ಟ್ರಕವಿ ಕುವೆಂಪು, ನಾಡಗೀತೆಗೆ ಅವಮಾನ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಕಸಾಪ ಆಗ್ರಹ

ನಾಡಗೀತೆಯನ್ನು ವಿರೂಪಗೊಳಿಸಿದ ವ್ಯಕ್ತಿಯನ್ನು ಹೀಗೆ ಬಿಟ್ಟರೆ ನಾಳೆ ರಾಷ್ಟ್ರಗೀತೆಯನ್ನು ಅವಮಾನಿಸುತ್ತಾರೆ. ಅಂತಹ ವ್ಯಕ್ತಿ ವಿರುದ್ಧ ಕ್ರಮ ಜರುಗಿಸುವುದು ಬಿಟ್ಟು ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸದಸ್ಯರನ್ನಾಗಿ ಮಾಡಿರುವುದು ಎಷ್ಟು ಸರಿ? ಎಂದು ಸ್ವಾಮೀಜಿಗಳು ಪ್ರಶ್ನಿಸಿದ್ದರು.

English summary
Karnataka is witnessing a major controversy surrounding revisions Kannada textbooks. Yaduveer Urs said that teach history as history.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X