ಕೆ.ಆರ್. ನಗರ; ವಿದ್ಯಾರ್ಥಿನಿ ಜೊತೆಗಿನ ಸೆಲ್ಫೀ ಹರಿಬಿಟ್ಟ ಶಿಕ್ಷಕ ಅಮಾನತು

Recommended Video

      Corona Virus in Kerala!, First case in India | Oneindia kannada

      ಮೈಸೂರು, ಜನವರಿ 30: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೆ.ಆರ್.ನಗರ ತಾಲೂಕಿನ ಬಂಡಹಳ್ಳಿಯಲ್ಲಿ ನಡೆದಿದೆ.

      ಬಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಎಂ.ಸುರೇಶ್ ಎಂಬಾತನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿದ ಶಿಕ್ಷಕ. ವಿದ್ಯಾರ್ಥಿನಿ ಬಂಡಹಳ್ಳಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಗ ವಿಶೇಷ ತರಗತಿ ತೆಗೆದುಕೊಳ್ಳುವ ನೆಪದಲ್ಲಿ ವಿದ್ಯಾರ್ಥಿನಿಯ ಮೈ ಕೈ ಮುಟ್ಟಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

      ವಿದ್ಯಾರ್ಥಿನಿ ಹತ್ತನೇ ತರಗತಿ ಉತ್ತೀರ್ಣಳಾದ ಬಳಿಕ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದಾಗ ಅಲ್ಲಿಗೂ ಭೇಟಿ ನೀಡಿದ ಶಿಕ್ಷಕ ಸುರೇಶ್ ವಿದ್ಯಾರ್ಥಿನಿಯನ್ನು ಊಟಕ್ಕೆ ಕರೆದುಕೊಂಡು ಹೋಗಿ ಆಕೆಯೊಂದಿಗೆ ಸೆಲ್ಫೀ ತೆಗೆದುಕೊಂಡು ಅದನ್ನು ವಾಟ್ಸಾಪ್ ಮೂಲಕ ಬೇರೆಯವರಿಗೆ ಕಳಿಸಿದ್ದ ಎನ್ನಲಾಗಿದೆ. ಇದು ವೈರಲ್ ಆದ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ಸುರೇಶ್‌ ವಿರುದ್ಧ ದೂರು ನೀಡಿದ್ದಳು.

      Teacher Arrested And Suspended For Harrasing Student In KR Nagar

      ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಜನವರಿ 26ರಂದು ಮುಖ್ಯಶಿಕ್ಷಕ ಸುರೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆತನನ್ನು ಫೆ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐರವರ ವರದಿಯನ್ನಾಧರಿಸಿ ಶಿಕ್ಷಣ ಇಲಾಖೆಯ ಆಯುಕ್ತರು ಸುರೇಶ್ ಅವರನ್ನು ಇಲಾಖೆಯ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿದ್ದಾರೆ.

      ಇಲಾಖೆಯ ಅಧಿಕಾರಿಗಳು ಬಂಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+