• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇರಳದ ಮಾಜಿ ರಾಜ್ಯಪಾಲರ ಮೊಮ್ಮಗಳು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

|

ಮೈಸೂರು, ಮೇ 28: ಕೇರಳದ ಮಾಜಿ ರಾಜ್ಯಪಾಲ, ದಿವಂಗತ ಬಿ.ರಾಚಯ್ಯ ಅವರ ಮೊಮ್ಮಗಳು ಸುಹಾಸಿನಿ (30) ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನರಾದರು.

ಇವರು, ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಸಹೋದರಿ ಉಮಾ ಮತ್ತು ನಿವೃತ್ತ ಕೆಎಎಸ್ ಅಧಿಕಾರಿ ಪುಟ್ಟಮಾದಯ್ಯ ದಂಪತಿಯ ದ್ವಿತೀಯ ಪುತ್ರಿ. ಮೈಸೂರಿನ ಕಾವೇರಿ ಫೋರ್ಟಿಸ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಶ್ರೀಹರ್ಷವರ್ಧನ್ ಅವರ ಪತ್ನಿ.

ಉತ್ತರ ಪ್ರದೇಶ ಚುನಾವಣೆಗೆ ನಿಯೋಜನೆಗೊಂಡಿದ್ದ ಮೈಸೂರಿನ ಪೇದೆ ಸಾವು

ಹೈಕೋರ್ಟ್‌ನಲ್ಲಿ ವಕೀಲೆಯಾಗಿದ್ದ ಸುಹಾಸಿನಿ, ವಿವಾಹದ ಬಳಿಕ ಮೈಸೂರಿನಲ್ಲಿ ವಕೀಲಿ ವೃತ್ತಿ ಮುಂದುವರಿಸಿದ್ದರು.

ಹೆರಿಗೆಗಾಗಿ ಮೈಸೂರಿನ ಕಾವೇರಿ ಫೋರ್ಡ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಶನಿವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಭಾನುವಾರ ಮಧ್ಯಾಹ್ನ ಹೃದಯಾಘಾತವಾಗಿದ್ದರಿಂದ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಅದೇ ರಾತ್ರಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾಗಿ ಕುಟುಂಬದವರು ತಿಳಿಸಿದರು.‌

ಪೌರಾಡಳಿತ ಸಚಿವ ಸಿ.ಎಸ್‌. ಶಿವಳ್ಳಿ ಹೃದಯಾಘಾತದಿಂದ ನಿಧನ

ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿದ್ದ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಮಾಜಿ ಸಂಸದ ವಿಜಯ್ ಶಂಕರ್, ಮಾಜಿ ಶಾಸಕ ವಾಸು ಸೇರಿದಂತೆ ಹಲವು ಗಣ್ಯರು ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.

English summary
Former Kerala governor B Rachaiah granddaughter suhasini died of heart attack at Mysuru. she was admitted at fortis hospital bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X