ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ಮುಂದೆ ಕೆಎಸ್‌ಒಯು ಮಾತ್ರ ರಾಜ್ಯದ ಏಕೈಕ ದೂರಶಿಕ್ಷಣ ಸಂಸ್ಥೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನೆವರಿ 1: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ಮತ್ತೊಂದು ಹೆಗ್ಗಳಿಕೆ ಪಡೆದಿದ್ದು, ರಾಜ್ಯ ಸರ್ಕಾರವು ಮುಕ್ತ ಹಾಗೂ ದೂರ ಶಿಕ್ಷಣ ಕಾರ್ಯಕ್ರಮ ನಡೆಸುವ ಏಕಮಾತ್ರ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವೆಂದು ಘೋಷಿಸಿದೆ.

ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಕೆಎಸ್ಒಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಸರ್ಕಾರವು ಕೆಎಸ್ಒಯು ಕಾಯ್ದೆ ತಿದ್ದುಪಡಿ ಮಾಡಿ ಮುಕ್ತ ಹಾಗೂ ದೂರ ಶಿಕ್ಷಣ ನಡೆಸುವ ಏಕಮಾತ್ರ ವಿಶ್ವವಿದ್ಯಾಲಯವನ್ನಾಗಿ ಘೋಷಣೆ ಮಾಡಿದೆ. 'ಎಲ್ಲರಿಗೂ ಎಲ್ಲೆಡೆ ಶಿಕ್ಷಣ' ಎಂಬುದು ಕೆಎಸ್ಓಯುನ ಉದ್ದೇಶವಾಗಿದೆ ಎಂದರು.

ದಕ್ಷಿಣ ವಲಯ ನೂತನ ಐಜಿಪಿಯಾಗಿ ಪವಾರ್ ಪ್ರವೀಣ್ ಮಧುಕರ್ ಅಧಿಕಾರ ಸ್ವೀಕಾರದಕ್ಷಿಣ ವಲಯ ನೂತನ ಐಜಿಪಿಯಾಗಿ ಪವಾರ್ ಪ್ರವೀಣ್ ಮಧುಕರ್ ಅಧಿಕಾರ ಸ್ವೀಕಾರ

ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಕೆಎಸ್ಒಯು ಕನಸು ನನಸಾಗಿದೆ. ಇದಕ್ಕೆ ಕಾರಣವಾದ ರಾಜ್ಯಪಾಲರಾದ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಧನ್ಯವಾದಗಳು ಎಂದು ಹೇಳಿದರು.

Mysuru: The KSOU Is The States Only Distance Education Institute

ಕೆಎಸ್ಒಯು ಈಗ 25 ವರ್ಷಗಳನ್ನು ಪೂರೈಸಿದೆ. ಈ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಉನ್ನತ ಮಟ್ಟದ ಸಮಿತಿ ರಚನೆ ಮಾಡಿ ಹೊಸ ಕಾರ್ಯಕ್ರಮಗಳನ್ನು ಪರಿಚಯ ಮಾಡಲಾಗುವುದು. ಸ್ಪರ್ಧಾತ್ಮಕ ಕೇಂದ್ರಕ್ಕೆ ತರಬೇತಿಗೆ ಪೂರಕವಾದ 24×7 ಗ್ರಂಥಾಲಯ, ವಸತಿ ಸೌಲಭ್ಯವುಳ್ಳ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.

ಕಳೆದ ಒಂದೂವರೆ ವರ್ಷದಲ್ಲಿ ಕೆಎಸ್ಒಯು ಸಾಕಷ್ಟು ಡಿಜಿಟಲ್ ಆಗಿದೆ. ಪ್ರವೇಶಾತಿ ಪ್ರಕ್ರಿಯೆ ಗಣಕೀಕರಣವಾಗಿದೆ. ಆನ್ಲೈನ್ ತರಗತಿಗಳು, ಕೆಎಸ್ಒಯು ಸ್ಟೂಡೆಂಟ್ ಆ್ಯಪ್ ಗಳನ್ನು ಬಿಡುಗಡೆ ಮಾಡಲಾಗಿದೆ. ಅಧ್ಯಾಪಕರ ಪದೋನ್ನತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

English summary
The government has amended the KSOU Act and declares it to be the only university for Open and distance Education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X