ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಲ್ಲಿ ಉದ್ಘಾಟನೆಯಾಯ್ತು ರಾಗಿ ಬೆಂಬಲ ಬೆಲೆ ಕೇಂದ್ರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 9: ಮೈಸೂರಿನ ಬಂಡಿಪಾಳ್ಯ ಎಪಿಎಂಸಿಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ರಾಗಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನೇಕ ರೈತಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರ ಸಹ ಭತ್ತ, ಗೋಧಿ ಸೇರಿದಂತೆ ಅನೇಕ ಆಹಾರ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದೆ ಎಂದರು.

ಮಂಡ್ಯದ ರೈತನ ಮನೆಯೀಗ ಭತ್ತ ವೈವಿಧ್ಯ ಕೇಂದ್ರ!ಮಂಡ್ಯದ ರೈತನ ಮನೆಯೀಗ ಭತ್ತ ವೈವಿಧ್ಯ ಕೇಂದ್ರ!

ರಾಜ್ಯ ಸರ್ಕಾರದಿಂದಲೂ ರೈತರಿಗೆ ಬೆಂಬಲ ಬೆಲೆ ನೀಡುತ್ತಿದ್ದು, ರಾಜ್ಯದ ಹಲವೆಡೆ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

Mysuru: The Millet Support Price Center Launched In Mysuru

ಇನ್ನು ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವ ಪ್ರಶ್ನೆಯೇ ಇಲ್ಲ. ಕೇಂದ್ರ ಸರ್ಕಾರ ಸಹ ಈ ಸಾಲಿನ ಬಜೆಟ್ ನಲ್ಲಿ ಎಪಿಎಂಸಿಗಳ ಉನ್ನತೀಕರಣಕ್ಕೆ ಅನುದಾನ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ಸಹ ಎಪಿಎಂಸಿಗಳ ಮೂಲಕ ರೈತರಿಗೆ ಮುಟ್ಟಿಸಬೇಕಾದ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

19.99 ಲಕ್ಷ ರೈತರಿಗೆ 12,975.34 ಕೋಟಿ ರೂಪಾಯಿ ಸಾಲ

ಕೋವಿಡ್ ನಡುವೆಯೂ ರೈತರಿಗೆ ಬೆಳೆ ಸಾಲಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ

ಸಹಕಾರ ಇಲಾಖೆ ಮುಖಾಂತರ ರೈತರಿಗೆ ಸಾಲ ನೀಡಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ.

ಒಟ್ಟಾರೆ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19,99,508 ರೈತರಿಗೆ 12,975.34 ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಸೋಮಶೇಖರ್ ಅವರು ಮಾಹಿತಿ ನೀಡಿದರು.

English summary
ST Somashekhar, Minister of Co-operative, inaugurated the millet Support Price Purchasing Center during his visit to the Bandipalya APMC in Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X