ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಮುಂಡಿ ಬೆಟ್ಟಕ್ಕೆ ಭೇಟಿ

ಮೈಸೂರು, ಸೆಪ್ಟೆಂಬರ್ 29: ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮೊದಲು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟಕ್ಕೆ ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ದಂಪತಿ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಬರಮಾಡಿಕೊಂಡಿತು.

ಚಾಮುಂಡಿ ಬೆಟ್ಟ ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಎನ್.ಎಸ್ ಯತಿರಾಜ್ ಸಂಪತ್ ಕುಮಾರನ್, ವ್ಯವಸ್ಥಾಪಕ ಗೋವಿಂದ ರಾಜ್ ಹಾಗೂ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೂತನ ಜಿಲ್ಲಾಧಿಕಾರಿಗಳನ್ನು ಬರಮಾಡಿಕೊಂಡರು.

Mysuru: The New DC Rohini Sinduri Has Visited To Chamundi Hill Today

ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮೈಸೂರು ಜಿಲ್ಲಾಧಿಕಾರಿ ಕಚೇರಿಯತ್ತ ರೋಹಿಣಿ ಸಿಂಧೂರಿ ಪಯಣ ಬೆಳೆಸಿದರು.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ 2009 ಬ್ಯಾಚಿನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Mysuru: The New DC Rohini Sinduri Has Visited To Chamundi Hill Today

ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ರೋಹಿಣಿ ಸಿಂಧೂರಿ ದಾಸರಿ ಅವರು ಕಳೆದ ಫೆಬ್ರವರಿಯಿಂದ ಇಲ್ಲಿ ತನಕ ನಾಲ್ಕನೇ ಇಲಾಖೆ ನೋಡುತ್ತಿದ್ದಾರೆ.

ಮೈಸೂರು ದಸರಾಕ್ಕೂ ಮುನ್ನ ಹಾಲಿ ಜಿಲ್ಲಾಧಿಕಾರಿ ಬಿ ಶರತ್ ಅವರನ್ನು ವರ್ಗಾವಣೆ ಮಾಡದಂತೆ ಸರ್ಕಾರದ ಮೇಲೆ ಅವರ ಸಮುದಾಯದವರು ಒತ್ತಡ ಹೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+