• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೆಪ್ಟೆಂಬರ್‌ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ; ಸಚಿವ ಸುರೇಶ್‌ ಕುಮಾರ್‌

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 18: ಸೆಪ್ಟೆಂಬರ್‌ 21 ರಿಂದ ಶಾಲೆಗಳು ತೆರೆಯಲಿವೆ. ಆದರೆ, ತರಗತಿಗಳು ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಗುವವರೆಗೂ ತರಗತಿಗಳು ನಡೆಯುವುದಿಲ್ಲ. ಆದ್ದರಿಂದ ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕಿದೆ ಎಂದರು.

ಸರಳ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ: ಮೈಸೂರು ಉಸ್ತುವಾರಿ ಸಚಿವ

ಏನಾದರೂ ಸಮಸ್ಯೆ ಬಂದರೆ ತಾಲ್ಲೂಕು ಶಿಕ್ಷಣಾಧಿಕಾರಿ ಕ್ರಮಕೈಗೊಳ್ಳುತ್ತಾರೆ. ಹೀಗಾಗಿ, ಯಾವುದೇ ಸಮಸ್ಯೆ ಇದ್ದರೆ ಪೋಷಕರು ಬಿಇಒಗಳನ್ನು ಸಂಪರ್ಕಿಸಿ ಎಂದು ಹೇಳಿದರು.

ನಾನು ಹೋದ ಕಡೆಯಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ, ಪೋಷಕರು ಮಾತ್ರ ಆತಂಕದಲ್ಲಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳುವ ಜವಾಬ್ದಾರಿ ನಮ್ಮ ಇಲಾಖೆಯದ್ದಾಗಿದೆ ಎಂದರು.

   Sandalwood Drug mafia ವಿಚಾರವಾಗಿ Akul , santosh ,yuvarajಗೆ CCB ಬುಲಾವ್ | Oneindia Kannada

   ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಯಾವುದೇ ಸಾಧ್ಯತೆಗಳು ರಾಜ್ಯದಲ್ಲಿ ಇಲ್ಲ. ಶೇ.100ಕ್ಕೆ ನೂರರಷ್ಟು ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಅದು ಸಿಎಂ‌ ಅವರ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

   English summary
   Schools will open from September 21. However, there will be no classes Education Minister S. Suresh Kumar made it clear that.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X