• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಈ ಬಾರಿ ಬಜೆಟ್ ಕೊರತೆ ಇರಲಿದೆ ಎಂದ ಸಿಎಂ ಯಡಿಯೂರಪ್ಪ

By ಮೈಸೂರು ಪ್ರತಿನಿಧಿ
|

ಮೈಸೂರು, ಜನವರಿ 23: ಕೋವಿಡ್ ಕಾರಣದಿಂದಾಗಿ ರಾಜ್ಯದಲ್ಲಿ ಸಂಪನ್ಮೂಲದ ಕೊರತೆ ಇದೆ. ಹಾಗಾಗಿ ಈ ಬಾರಿ ಬಜೆಟ್ ಕೊರತೆ ಇರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ವೈ, ಕಳೆದ ಬಾರಿ 2 ಲಕ್ಷ 37 ಸಾವಿರ ಕೋಟಿ ರೂ. ಬಜೆಟ್ ಗಾತ್ರವಿತ್ತು. ಈ ಬಾರಿ ಆ ಗಾತ್ರದ ಬಜೆಟ್ ಇರುವುದಿಲ್ಲ. ರಾಜ್ಯದಲ್ಲಿ ಶೇ.90ರಷ್ಟು ಕೋವಿಡ್ ನಿಯಂತ್ರಣದಲ್ಲಿದ್ದು, ಕೋವಿಡ್ ನಿಯಂತ್ರಣಕ್ಕೆ ಬೇಕಾಗಿರುವಷ್ಟು ಹಣಕಾಸು ನೆರವನ್ನು ಸರಕಾರ ಪೂರೈಸುತ್ತದೆ ಎಂದು ಹೇಳಿದರು.

BREAKING: ಗಣಿಕಾರಿಕೆ ಮಾಡುವವರಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ!

ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ ಹಾಗೂ ಅಪಾರ ಪ್ರಮಾಣದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ‌ ಅಗತ್ಯ. ಆದರೆ ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ ಎಂದರು.

ಆದರೆ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂ ಹಾನಿಯಾಗಿದೆ ಅಂತ ಗೊತ್ತಾಗಿದೆ‌. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಮೈಸೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದರು.

ಸಿಎಂ ಯಡಿಯೂರಪ್ಪ ಅವರು ಅಕ್ಕಮಹಾದೇವಿ ಪ್ರತಿಮೆ ಅನಾವರಣ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಸಿದರು. ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ರಾಮದಾಸ್, ಜಿಟಿ ದೇವೆಗೌಡ, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ರಾಜೀವ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

English summary
There is a shortage of resources in the state due to Covid. Chief Minister BS Yediyurappa said that the budget deficit will be in short supply this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X