ಸೋಂಕಿತರ ಚಿಕಿತ್ಸೆಗೆ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸಾವಿರ ಬೆಡ್
ಮೈಸೂರು, ಜುಲೈ 15: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸೋಂಕಿತರ ಚಿಕಿತ್ಸೆಗಾಗಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣವನ್ನು ಆಯ್ಕೆ ಮಾಡಿಕೊಂಡು ಎಲ್ಲಾ ಸಿದ್ಥತೆಗಳನ್ನು ಮಾಡಿಕೊಳ್ಳುತ್ತಿದೆ.
ಈ ಬಗ್ಗೆ ಮಾತನಾಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, "ಚಾಮುಂಡಿ ವಿಹಾರ ಕ್ರೀಡಾಂಗಣವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಒಳಾಂಗಣ ಕ್ರೀಡಾಂಗಣ ಹಾಗೂ ಮುಖ್ಯ ಸಭಾಂಗಣದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಡ್ ಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸುಮಾರು 1000 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ ಗಳಿಗೂ ತಂಗಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.












Click it and Unblock the Notifications