ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಂಕಿತರ ಚಿಕಿತ್ಸೆಗೆ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸಾವಿರ ಬೆಡ್‌

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 15: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸೋಂಕಿತರ ಚಿಕಿತ್ಸೆಗಾಗಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣವನ್ನು ಆಯ್ಕೆ ಮಾಡಿಕೊಂಡು ಎಲ್ಲಾ ಸಿದ್ಥತೆಗಳನ್ನು ಮಾಡಿಕೊಳ್ಳುತ್ತಿದೆ.

ಈ ಬಗ್ಗೆ ಮಾತನಾಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, "ಚಾಮುಂಡಿ ವಿಹಾರ ಕ್ರೀಡಾಂಗಣವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಒಳಾಂಗಣ ಕ್ರೀಡಾಂಗಣ ಹಾಗೂ ಮುಖ್ಯ ಸಭಾಂಗಣದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಡ್ ಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

Thousand Bed Facility At Chamundi Vihar Stadium To Treat Coronavirus Patients In Mysuru

 ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡದ ಖಾಸಗಿ ಆಸ್ಪತ್ರೆಗಳಿಗೆ ಮೈಸೂರು ಡಿಸಿ ಸೂಚನೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡದ ಖಾಸಗಿ ಆಸ್ಪತ್ರೆಗಳಿಗೆ ಮೈಸೂರು ಡಿಸಿ ಸೂಚನೆ

ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸುಮಾರು 1000 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ ಗಳಿಗೂ ತಂಗಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

English summary
As the number of coronavirus cases in the district is increasing day by day, the district administration has been working on setting up the Chamundi vihar Stadium to treat the infected
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X