ಜಿಲ್ಲಾಧಿಕಾರಿಗೆ ಧಮ್ಕಿ: ಸಿಎಂ ಆಪ್ತ ಮರಿಗೌಡ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮೈಸೂರು, ಮೇ 04 : ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ನಜರ್ ಬಾದ್ ಠಾಣೆ ಪೊಲೀಸರು ಗುರುವಾರ ಮೈಸೂರಿನ 3ನೇ ಜೆಎಂಎಫ್ ಸಿ ನ್ಯಾಯಲಯಕ್ಕೆ ಸುಮಾರು 45 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ.[ಜನ್ಮಾಷ್ಟಮಿಯಂದು ಕೃಷ್ಣ ಹುಟ್ಟಿದ ಸ್ಥಳದಿಂದ ಮರೀಗೌಡ ಹೊರಕ್ಕೆ]

ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ಮರೀಗೌಡ ವಿರುದ್ಧ ಸೆಕ್ಷನ್ 341, 354 ಮತ್ತು 504 ಅಡಿಯಲ್ಲಿ ದೂರು ದಾಖಲಿಸಿದ್ದರು.

ಯಾವ ಪ್ರಕರಣ?

ಯಾವ ಪ್ರಕರಣ?

ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದರು. ಶಿಷ್ಟಾಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡಿದ್ದರು. ಆಗ ಅಲ್ಲಿಗೆ ಆಗಮಿಸಿದ್ದ ಡಿಸಿಯಾಗಿದ್ದ ಸಿ.ಸಿಖಾ ಅವರನ್ನು ಮರೀಗೌಡ ಏಕವಚನದಲ್ಲಿ ನಿಂದಿಸಿದ್ದರು.

ಕಾಂಗ್ರೆಸ್ ನಿಂದ ಅಮಾನತು

ಕಾಂಗ್ರೆಸ್ ನಿಂದ ಅಮಾನತು

ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದ ಮರೀಗೌಡ ಅವರನ್ನು ಕಾಂಗ್ರೆಸ್ ನಿಂದ ಆಗಸ್ಟ್ 9 ರಂದು ಅಮಾನತು ಮಾಡಲಾಗಿತ್ತು.

ಶಿಖಾ ವರ್ಗಾವಣೆ

ಶಿಖಾ ವರ್ಗಾವಣೆ

ಮರೀಗೌಡ ಶರಣಾಗತಿ ನಂತರ (ಆಗಸ್ಟ್ 10) ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರನ್ನು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು.

ಮರೀಗೌಡ ಹೊರಕ್ಕೆ

ಮರೀಗೌಡ ಹೊರಕ್ಕೆ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಶರಣಾಗಿದ್ದ ಸಿಎಂ ಸಿದ್ದರಾಮಯ್ಯ ಆಪ್ತ ಮರೀಗೌಡ ಆಗಸ್ಟ್ 25ರಂದು ಜಾಮೀನಿನ ಮೇಲೆ ಹೊರ ಬಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+